ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಶನಿವಾರ ಸಿದ್ಧಲಿಂಗೇಶ್ವರ ಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನೆರವೇರಿತು. ಅಪಾರ ಸಂಖ್ಯೆಯ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.

ನಂದಿಧ್ವಜ, ನಾದಸ್ವರ, ವೀರಗಾಸೆ, ಡೋಲು, ಪಟ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಭಕ್ತರು ದೇವರಿಗೆ ದವನ, ಹೂವು, ಬಾಳೆ ಹಣ್ಣು ಎಸೆದು ನಮಿಸಿದರು. ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರು ಭಾಗವಹಿಸಿದ್ದರು.

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಠದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಕಡೆಗಳಿಂದ ಮಠಕ್ಕೆ ಬಂದಿದ್ದ ಭಕ್ತರು ರಾತ್ರಿ ಮಠದಲ್ಲೇ ಉಳಿದು ಜಾಗರಣೆಯಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆ ರಥೋತ್ಸವದ ನಂತರ ತಮ್ಮ ಊರುಗಳತ್ತ ತೆರಳಿದರು. ಶಿವಕುಮಾರ ಸ್ವಾಮೀಜಿಯ ಗದ್ದುಗೆಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಮಠದತ್ತ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ಗದ್ದುಗೆಯ ದರ್ಶನ ಪಡೆದರು.

ಜಾತ್ರೆಯ ಅಂಗವಾಗಿ ಏರ್ಪಡಿಸಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪ್ರತಿ ದಿನ ನೂರಾರು ಸಂಖ್ಯೆಯ ಸಾರ್ವಜನಿಕರು ವಸ್ತು ಪ್ರದರ್ಶನಕ್ಕೆ ಭೇಟಿ ನೀಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.