ತುಮಕೂರು: ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಕೃಷಿಗೆ ಸಂಬಂಧಿಸಿದಂತೆ ಬೇಯರ್ಸ್ ಕಂಪನಿ ಜತೆಗೆ ಭಾರತೀಯ ಕೃಷಿ ಮಂಡಳಿ (ಐಸಿಎಆರ್) ಮಾಡಿಕೊಂಡಿರುವ ಒಪ್ಪಂದಗಳನ್ನು ವಿರೋಧಿಸಿ ಅ.2ರಂದು ಗಾಂಧಿ ಸಹಜ ಬೇಸಾಯ ಆಶ್ರಮದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ತಾಲ್ಲೂಕಿನ ದೊಡ್ಡಹೊಸೂರು ಬಳಿಯ ಆಶ್ರಮದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನಡೆಯಲಿದೆ. ಆಶ್ರಮದಲ್ಲಿ ಬೆಳಿಗ್ಗೆ 9 ಗಂಟೆಗೆ ಡಾ.ಎಚ್.ಮಂಜುನಾಥ್, ಸಿ.ಯತಿರಾಜು ಒಪ್ಪಂದ ಕುರಿತು ಆಸಕ್ತರ ಜತೆ ಚರ್ಚೆ ನಡೆಸಲಿದ್ದಾರೆ. 10 ಗಂಟೆಗೆ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ.

ಕೃಷಿ ಕ್ಷೇತ್ರಕ್ಕೆ ವಿನಾಶಕಾರಿಯಾಗಿರುವ ಒಪ್ಪಂದ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ. ರೈತ ಸಂಘ, ಪರಿಸರ, ಗ್ರಾಹಕ ಸಂಘಟನೆಗಳ ಪದಾಧಿಕಾರಿಗಳು, ಆಸಕ್ತ ಕೃಷಿ, ಪರಿಸರ ಪ್ರೇಮಿಗಳು ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಶ್ರಮದ ಸಂಚಾಲಕ ಡಾ.ಎಚ್.ಮಂಜುನಾಥ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.