3554 ಅಂಗವಿಕಲ ವಿದ್ಯಾರ್ಥಿಗಳು
‘ಜಿಲ್ಲೆಯಲ್ಲಿ 3554 ಅಂಗವಿಕಲ ವಿದ್ಯಾರ್ಥಿಗಳು 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಶಾಲೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ದಾಸ್ ಸೂರ್ಯವಂಶಿ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಅಂಗವಿಕಲರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಶಾಲೆಗಳಲ್ಲಿ ಕೆಳ ಮಹಡಿಯ ಕೊಠಡಿಗಳಲ್ಲಿ ಅಂಗವಿಕಲ ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು. ಗ್ರಾ.ಪಂ ಮಟ್ಟದಲ್ಲಿ ಅಂಗವಿಕಲರ ಸಂಜೀವಿನಿ ಸ್ವಸಹಾಯ ಸಂಘ ಸ್ಥಾಪಿಸಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಉಪವಿಭಾಗಾಧಿಕಾರಿ ಗೌರವ್‌ಕುಮಾರ್ ಶೆಟ್ಟಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪಾ ಎಂ.ದೊಡ್ಮನಿ ಇತರರು ಹಾಜರಿದ್ದರು.