ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸರ್ಕಾರ ಕೂಡಲೇ ವೈದ್ಯರನ್ನು ನಿಯೋಜಿಸಿ, ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ಸಾವಿರಕ್ಕೂ ಹೆಚ್ಚು ಜನ ಚಿಕಿತ್ಸೆಗಾಗಿ ಬರುತ್ತಾರೆ. 14 ವೈದ್ಯರ ಹುದ್ದೆಗಳಲ್ಲಿ 10 ಖಾಲಿ ಇವೆ. ನಾಲ್ಕು ಜನ ವೈದ್ಯರಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಲಾಗುತ್ತಿಲ್ಲ. 8 ರಿಂದ 10 ಮಂದಿ ಹೆರಿಗೆಗೆ ಬರುತ್ತಾರೆ. ಅವರಿಗೂ ಚಿಕಿತ್ಸ ಕೊಡಲಾಗುತ್ತಿಲ್ಲ. ವ್ಯವಸ್ಥಿತವಾಗಿ ಆಸ್ಪತ್ರೆ ನಡೆಸಲಾಗದಿದ್ದರೆ ಆಸ್ಪತ್ರೆ ಬಂದ್ ಮಾಡಿಕೊಂಡು ಹೋಗಿ ಎಂದು ಖಾರವಾಗಿ ಹೇಳಿದ್ದೇನೆ ಎಂದರು.

ರಾಜ್ಯದಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತಾಲ್ಲೂಕಿನಿಂದ 50 ಸಾವಿರಕ್ಕೂ ಹೆಚ್ಚು ಮಂದಿ ಇತರೆಡೆಗೆ ವಲಸೆ ಹೋಗುತ್ತಿದ್ದಾರೆ. 4,000 ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ಸರ್ಕಾರ ರದ್ದು ಮಾಡಿದೆ. ರಾಜ್ಯದ 20 ಲಕ್ಷ ಕುಟುಂಬಗಳ ಪಡಿತರ ಚೀಟಿ ರದ್ದು ಮಾಡಲಾಗಿದೆ. ಸರ್ಕಾರಕ್ಕೆ ಮಾನವೀಯತೆ ಇಲ್ಲ. ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದ್ದು, ಬಡವರ ಹೊಟ್ಟೆ ಮೇಲೆ ಹೊಡೆಯಲಾಗುತ್ತಿದೆ. ಹೆಚ್ಚಿನ ಸಾಲ ಮಾಡಿದ್ದು, ಸಾಲ ಮರುಪಾವತಿಗೆ ಮತ್ತೆ ಸಾಲಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅವಸಾನದ ಅಂಚಿನಲ್ಲಿದೆ. 18 ತಿಂಗಳಿನಿಂದ ಭ್ರಷ್ಟಾಚಾರ ಹಗರಣಗಳನ್ನು ಸರಮಾಲೆ ಮಾಡಿ ಕೊರಳಿಗೆ ಹಾಕಿಕೊಂಡಿದೆ. ಜನರ ಬಳಿ ಹೋಗಲು ನೈತಿಕತೆ ಇಲ್ಲ. ಸಿದ್ದರಾಮಯ್ಯ ಸರ್ಕಾರ ಒಳ ಮೀಸಲಾತಿ ಕೊಡುತ್ತೇವೆ ಎಂದು ಹೇಳಿಕೊಂಡು ಮೋಸ ಮಾಡುತ್ತಿದೆ ಎಂದರು.

ಮಳೆ ಹಾನಿಯಿಂದ ಬಿದ್ದಿರುವ ಮನೆಗಳು, ಬೆಳೆ ಹಾನಿಗೆ ಪರಿಹಾರ ನೀಡಬೇಕು. ಕಂದಾಯ ಸಚಿವರು ಸರಿಯಾಗಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಎಂ.ಕೆ. ನಾರಾಯಣಪ್ಪ, ಗಂಗಾಧರನಾಯ್ಡು, ಶಿವಕುಮಾರ ಸಾಕೇಲ್, ಚನ್ನಮಲ್ಲಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.