ತುಮಕೂರು: ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ನ.3ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಭರವಸೆ ಸಿಗದಿದ್ದಾಗ ಕಳೆದ ತಿಂಗಳು ಕಾಂಗ್ರೆಸ್ ತೊರೆದಿದ್ದರು. ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದ ದಟ್ಟವಾಗಿ ಹರಿದಾಡುತ್ತಿತ್ತು. ಇದಕ್ಕೆ ಇಂಬು ನೀಡುವಂತೆ ಅವರು ಬಿಜೆಪಿಯ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಮೊದಲು ಕಾಂಗ್ರೆಸ್ನಲ್ಲಿದ್ದ ಮುದ್ದಹನುಮೇಗೌಡ ಅವರು ನಂತರ ಜೆಡಿಎಸ್ ಸೇರಿದ್ದರು. ಬಳಿಕ ಮತ್ತೆ ಕಾಂಗ್ರೆಸ್ಗೆ ಮರಳಿದ್ದರು. ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದರಿಂದ ತುಮಕೂರು ಸಂಸದರಾಗಿದ್ದ ಮುದ್ದಹನುಮೇಗೌಡ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.