ತುಮಕೂರು: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಸೋಲಿಗೆ ಕಾರಣನಾಗಿದ್ದೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ನೀವು ಬಂದು ಪ್ರಮಾಣ ಮಾಡಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಅವರು ಗೌಡರ ಕುಟುಂಬಕ್ಕೆ ಸವಾಲು ಹಾಕಿದರು.

ತಿಪಟೂರು ತಾಲ್ಲೂಕಿನ ಕೆ.ಬಿ.ಕ್ರಾಸ್ ಬಳಿ ಭಾನುವಾರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ದೇವೇಗೌಡ ವಿರುದ್ಧ ಪ್ರಚಾರ ಮಾಡಿಲ್ಲ ಎಂದು ಪ್ರಮಾಣ ಮಾಡುತ್ತೇನೆ. ನೀವು ಬಂದು ಪ್ರಮಾಣ ಮಾಡಿ. ಅನಗತ್ಯವಾಗಿ ನನ್ನ ಮೇಲೆ ಸುಳ್ಳು ಆಪಾದನೆ ಹೊರಿಸಬೇಡಿ. ಸೋಲಿಸಿದ್ದಾರೆ ಎಂಬ ವಿಚಾರ ಈವರೆಗೂ ಪ್ರಸ್ತಾಪವೇ ಆಗಿರಲಿಲ್ಲ. ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ನಂತರ ಈರೀತಿ ಮಾಡಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.