ತುಮಕೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸುವ ಪರೀಕ್ಷೆಗಳಲ್ಲಿ ಅವ್ಯವಹಾರ ಮುಂದುವರಿದಿದೆ. ಇದೀಗ ಯುಜಿಸಿ ನೆಟ್ ಪರೀಕ್ಷೆಯಲ್ಲೂ ಅಕ್ರಮವೆಸಗಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಐಡಿಎಸ್ಒ ಸಂಘಟನೆ ಒತ್ತಾಯಿಸಿದೆ.

ಮೊನ್ನೆ ನೀಟ್, ನಿನ್ನೆ ನೆಟ್ ಪರೀಕ್ಷೆಯ ಅಕ್ರಮದಿಂದ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಎನ್ಟಿಎ ಮತ್ತು ಶಿಕ್ಷಣ ಸಚಿವಾಲಯವು ನೀಟ್ ಅವ್ಯವಹಾರ ಚಿಕ್ಕದೆಂದು ಬಿಂಬಿಸಲು ಪ್ರಯತ್ನಿಸುತ್ತಿವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಅಭಿಪ್ರಾಯಪಟ್ಟಿದ್ದಾರೆ.

ನೆಟ್ ಪರೀಕ್ಷೆ ನಡೆದ ಮರು ದಿನವೇ ಅದನ್ನು ರದ್ದು ಪಡಿಸಿ, ಸಿಬಿಐಗೆ ಒಪ್ಪಿಸಿರುವುದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೇಂದ್ರಗಳಿಗೆ ತಲುಪಲು ಅಭ್ಯರ್ಥಿಗಳ ದೂರದ ಪ್ರಯಾಣ, ವಸತಿ, ಪರೀಕ್ಷಾ ವೆಚ್ಚಕ್ಕೆ ಯಾರು ಹೊಣೆ? ಎನ್ಟಿಎ ಬೇಜವಾಬ್ದಾರಿಯಿಂದ ಅಭ್ಯರ್ಥಿಗಳ ಭವಿಷ್ಯವನ್ನು ಅತಂತ್ರವಾಗಿಸಿದೆ ಎಂದು ದೂರಿದ್ದಾರೆ.

ನೀಟ್, ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಶಿಕ್ಷಕರು, ಅಗತ್ಯ ಸೌಲಭ್ಯ ಒದಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಪಡಿಸಬೇಕು. ಪ್ರಬಲ ಕೋಚಿಂಗ್ ಸಂಸ್ಥೆಗಳ ಮೇಲೆ ನಿರ್ಬಂಧ ವಿಧಿಸಬೇಕು. ಪ್ರಕರಣವು ತಾರ್ಕಿಕ ಅಂತ್ಯ ತಲುಪುವ ತನಕ ನೀಟ್ ಕೌನ್ಸೆಲಿಂಗ್ ತಡೆ ಹಿಡಿಯಬೇಕು. ನೆಟ್ ಪರೀಕ್ಷೆಯ ದಿನಾಂಕ ಪ್ರಕಟಿಸಿ, ಯುಜಿಸಿಯೇ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.