ತುಮಕೂರು: ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಎಂದಿಗೂ ಸಾಧ್ಯವಿಲ್ಲ. ಬಿಜೆಪಿ, ಆರ್ಎಸ್ಎಸ್ ದಕ್ಷಿಣ ಭಾರತವನ್ನು ವಾಮಮಾರ್ಗದಿಂದ ಕಪಿಮುಷ್ಠಿಗೆ ತೆಗೆದುಕೊಳ್ಳಲು ಹುನ್ನಾರ ನಡೆಸುತ್ತಿವೆ ಎಂದು ವಕೀಲ ಪ್ರೊ.ರವಿವರ್ಮಕುಮಾರ್ ಆರೋಪಿಸಿದರು.

ನಗರದ ವಿಶ್ವವಿದ್ಯಾಲಯ ಕಲಾ ಕಾಲೇಜಿನಲ್ಲಿ ಶನಿವಾರ ನೆಲಸಿರಿ ಸಾಂಸ್ಕೃತಿಕ ವೇದಿಕೆಯಿಂದ ಏರ್ಪಡಿಸಿದ್ದ ಜಿ.ಶ್ರೀನಿವಾಸಕುಮಾರ್ ನೆನಪಿನ ಸಂವಾದ ಹಾಗೂ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

‘ಒಂದು ದೇಶ, ಒಂದು ಭಾಷೆಯಂತೆ, ಒಂದು ರಾಷ್ಟ್ರ, ಒಂದು ಚುನಾವಣೆಯೂ ವಿಫಲವಾಗಲಿದೆ. ನ್ಯಾಯಾಂಗದ ಮುಖ್ಯಸ್ಥ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಗಣಪತಿ ಪ್ರತಿಷ್ಠಾಪನೆಗೆ ಪ್ರಧಾನಿ ಅವರನ್ನು ಆಹ್ವಾನಿಸಿ ಈ ದೇಶಕ್ಕೆ ಕೆಟ್ಟ ಸಂದೇಶ ನೀಡಿದ್ದಾರೆ. ಇದೊಂದು ಅಸಂವಿಧಾನಿಕ ಕ್ರಿಯೆ’ ಎಂದು ಹೇಳಿದರು.

ದೇಶದ ಶೇ 57ರಷ್ಟು ಸಂಪತ್ತು ಶೇ 10ರಷ್ಟು ಜನರ ಕೈಯಲಿದೆ. ಉಳಿದ ಶೇ 43ರಷ್ಟು ಸಂಪತ್ತಿಗೆ ಶೇ 90ರಷ್ಟು ಜನ ಹೋರಾಟ ನಡೆಸಬೇಕಾಗಿದೆ. ಇತ್ತೀಚಿನ ವಿಶ್ವಸಂಸ್ಥೆಯ ವರದಿ ಪ್ರಕಾರ ಅತ್ಯಂತ ಕಡು ಬಡತನದ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ. ಬಡವರು– ಶ್ರೀಮಂತರ ನಡುವಿನ ಕಂದಕ ದೊಡ್ಡಾಗುತ್ತಿದೆ ಎಂದು ಎಚ್ಚರಿಸಿದರು.

ಅಂಬೇಡ್ಕರ್ ಸಂವಿಧಾನ ರಚನೆಯ ವೇಳೆ ಎಲ್ಲ ವರ್ಗಗಳಿಗೂ ಶಿಕ್ಷಣ ದೊರೆಯುವಂತೆ ಮಾಡಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಒದಗಿಸುವತ್ತ ದಾಪುಗಾಲು ಇಟ್ಟಿದ್ದರು. ಆದರೆ, ಇದುವರೆಗೂ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಸಂವಿಧಾನದ ಆಶಯವನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ವಿಫಲವಾಗಿವೆ ಎಂದರು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಆರ್.ಮಧುಸೂಧನ್, ಸಮೀನ ಬಾನು, ಜಿ.ಅನುಷಾ, ಎಚ್.ಜಿ.ಮಮತಾ, ಕರಿಯಣ್ಣ, ಸೋಮರೆಡ್ಡಿ, ಡಿ.ಕೆ.ಕಾವ್ಯಾ, ವಿ.ಎನ್.ಅಪೇಕ್ಷ ಅವರಿಗೆ ಬಹುಮಾನ ವಿತರಿಸಲಾಯಿತು.

ಕಲಾ ಕಾಲೇಜು ಪ್ರಾಂಶುಪಾಲ ಬಿ.ಕರಿಯಣ್ಣ, ಚಿಂತಕ ಕೆ.ದೊರೈರಾಜ್, ಉದ್ಯಮಿ ಡಿ.ಟಿ.ವೆಂಕಟೇಶ್, ವಕೀಲ ಎಚ್.ವಿ.ಮಂಜುನಾಥ್, ವೈದ್ಯ ಬಸವರಾಜು, ನೆಲಸಿರಿ ಟ್ರಸ್ಟ್ ಅಧ್ಯಕ್ಷ ಗಂಗಾಧರ ಬೀಚನಹಳ್ಳಿ, ಕಾರ್ಯದರ್ಶಿ ಮಲ್ಲಿಕಾ ಬಸವರಾಜು, ನಟರಾಜಪ್ಪ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.