ತುಮಕೂರು: ‘ದೇಶದಲ್ಲಿ ಹಣಬಲ ಇರುವವರು ಮಾತ್ರ ರಾಜಕೀಯ ವ್ಯವಸ್ಥೆ ನಿಯಂತ್ರಣ ಮಾಡುತ್ತಿರುವುದರಿಂದ ನಾವು ಮತ್ತೆ ಬ್ರಿಟಿಷರ ಕಾಲಕ್ಕೆ ತಲುಪುತ್ತಿದ್ದೇವೆ. ಈ ವ್ಯವಸ್ಥೆ ಬದಲಾಗಬೇಕಿದೆ’ ಎಂದು ಉತ್ತಮ ಪ್ರಜಾಕೀಯ ಪಕ್ಷದ ಮುಖಂಡ, ನಟ ಉಪೇಂದ್ರ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಶ್ವಾಸನೆಗಳನ್ನು ಈಡೇರಿಸದೇ ಇರುವ ಜನಪ್ರತಿನಿಧಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಅವಕಾಶವನ್ನು ಮತದಾರರಿಗೆ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕು’ ಎಂದು ಹೇಳಿದರು.

ಮೊದಲ ಹಂತದ ಚುನಾವಣೆಗೆ 14 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. 2ನೇ ಹಂತದಲ್ಲಿ ನಡೆಯುವ ಚುನಾವಣೆಗೆ ಏ.7 ರಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಅವರಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಹೇಳಿದರು.

ನಾವು ಆಯ್ಕೆ ಮಾಡಿರುವ ಅಭ್ಯರ್ಥಿಗಳು ಕಷ್ಟ ಕಾರ್ಪಣ್ಯಗಳನ್ನು ಎದುರಿಸಿದ್ದವರು. ಸಮಾಜಕ್ಕಾಗಿ ಹೋರಾಡುವ ಮನೋಭಾವವುಳ್ಳವರು. ಜನರ ಕೆಲಸ ಕಾರ್ಯಗಳನ್ನು ಮಾಡುವುದು ಅವರ ಮೊದಲ ಕರ್ತವ್ಯವಾಗಿದೆ ಎಂದರು.

ಮತದಾರರೇ ಪ್ರಜಾಪ್ರತಿನಿಧಿಗಳು. ಜನಪ್ರತಿನಿಧಿಗಳಿಗೆ ನಾವು ಸಂಬಳ ಕೊಡುತ್ತಿದ್ದೇವೆ. ಆದರೆ ಸ್ವಾತಂತ್ರ್ಯ ಬಂದರೂ ದೇಶ ಬದಲಾಗಿಲ್ಲ. ಹಾಗಾಗಿ ಸಮಾಜದಲ್ಲಿ ಬದಲಾವಣೆ ಹಾಗೂ ಅಭಿವೃದ್ಧಿಯಗಾಗಿ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಕೋರಿದರು.

ಗೋಷ್ಠಿಯಲ್ಲಿ ತುಮಕೂರು ಲೋಕಸಭಾ ಅಭ್ಯರ್ಥಿ ಚಾಯಾ ಜಯಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.