ತುಮಕೂರು: ಒಳಮೀಸಲಾತಿ ವರ್ಗೀಕರಣ ಸಂಬಂಧ ನೀಡಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎಂದು ಶುಕ್ರವಾರ ಪ್ರತಿಭಟನೆ ನಡೆಯಿತು.

ಸದಾಶಿವ ಆಯೋಗದ ವರದಿಯನ್ನು ಮುಂದಿಟ್ಟುಕೊಂಡು ಪರಿಶಿಷ್ಟ ಜಾತಿಯನ್ನು ಛಿದ್ರಗೊಳಿಸುವ ಹುನ್ನಾರ ನಡೆದಿದೆ. ಪರಿಶಿಷ್ಟರಲ್ಲೇ ಪರಸ್ಪರ ದ್ವೇಷವನ್ನು ಬಿತ್ತುವ ಕೆಲಸ ಮಾಡಲಾಗುತ್ತಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾನಗರ ಪಾಲಿಕೆ ಸದಸ್ಯ ಎಸ್.ಮಂಜುನಾಥ್ ಆರೋಪಿಸಿದರು.

ಪರಿಶಿಷ್ಟರು ಅಸ್ಪೃಶ್ಯತೆ, ದೌರ್ಜನ್ಯಕ್ಕೆ ಒಳಗಾಗಿದ್ದರಿಂದ 1935ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದಮನಿತ ಜಾತಿಗಳ ಪಟ್ಟಿಯಲ್ಲಿ ಅಲೆಮಾರಿ ಸಮುದಾಯಗಳಾದ ಭೋವಿ, ಕೊರಮ, ಕೊರಚ, ಬಂಜಾರ ಸಮುದಾಯಗಳನ್ನು ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಿದ್ದರು. ಅದನ್ನೇ ಅಂಬೇಡ್ಕರ್ ಮುಂದುವರೆಸಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಮುಂದಿಟ್ಟುಅಂಬೇಡ್ಕರ್ ಕೊಟ್ಟಿರುವ ಮೀಸಲಾತಿ ತಪ್ಪಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ದೂರಿದರು.

ಸೋರಿಕೆಯಾಗಿರುವ ಸದಾಶಿವ ಆಯೋಗದ ವರದಿಯಲ್ಲಿರುವ ವಿಚಾರಗಳನ್ನು ಸಾರ್ವಜನಿಕ ಚರ್ಚೆಗೆ ಲಭ್ಯವಾಗುವಂತೆ ಮಾಡಬೇಕು. ಇದರಿಂದ ಪರಿಶಿಷ್ಟರಲ್ಲಿಯೇ ಉಂಟಾಗಿರುವ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್, ‘ಪರಿಶಿಷ್ಟರಲ್ಲಿ ಒಡಕು ಉಂಟುಮಾಡುವ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಬಾರದು. ವರದಿ ಜಾರಿಗೆ ಸರ್ಕಾರ ಶಿಫಾರಸು ಮಾಡಿದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಪರಿಶಿಷ್ಟ ಜಾತಿಗಳ ನಡುವೆ ತಾರತಮ್ಯ ಉಂಟು ಮಾಡುವಂತಿರುವ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು, ಪಾರದರ್ಶಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಲ್ಲ. ಅಲೆಮಾರಿ ಸಮುದಾಯಗಳಾದ ಬಂಜಾರ, ಭೋವಿ, ಛಲವಾದಿ, ಕೊರಚ, ಕೊರಮ, ಅಲೆಮಾರಿ ಸಮುದಾಯಗಳನ್ನು ಸೌಲಭ್ಯಗಳಿಂದ ಹೊರಗಿಡುವಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

ಪಾಲಿಕೆ ಸದಸ್ಯರಾದ ಶಿವರಾಮ್, ವಿಶ್ವನಾಥ್, ಓಸಿಸಿಐ ಜಿಲ್ಲಾ ಘಟಕದ ಅಧ್ಯಕ್ಷ ಪುರುಷೋತ್ತಮ್, ಮುಖಂಡರಾದ ಕುಬೇರನಾಯಕ್, ಸೇವಂತ್ ವಾಸುದೇವ್, ಬಂಜಾರಜಾಗೃತ ದಳದ ಅಧ್ಯಕ್ಷ ತಿಪ್ಪಾನಾಯಕ್,ಕೊರಚ– ಕೊರಮ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.