ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ ನಾಲ್ಕನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ಜ. 21ರಂದು ಬೆಳಿಗ್ಗೆ 10.30ಗಂಟೆಗೆ ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ.

ಸ್ವಾಮೀಜಿ ಪುಣ್ಯಸ್ಮರಣೆಯನ್ನು ರಾಜ್ಯದಾದ್ಯಂತ ‘ದಾಸೋಹ ದಿನ’ವಾಗಿ ಆಚರಿಸಲಾಗುತ್ತದೆ. ಕೋವಿಡ್ ಕಾರಣ ಕಳೆದ ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಸಿದ್ಧತೆಗಳು ಜೋರಾಗಿ ನಡೆದಿವೆ. ಸಿದ್ಧಲಿಂಗ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವವಹಿಸಲಿದ್ದಾರೆ. ಬೆಂಗಳೂರಿನ ಬೇಲಿಮಠದ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.