ತಿಪಟೂರು: ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದ್ದು, ರಸ್ತೆ ನಿಯಮ ಪಾಲಿಸಿ ಅಪಘಾತಗಳನ್ನು ತಡೆಯಬೇಕು ಎಂದು ಸೆಷನ್ಸ್ ನ್ಯಾಯಾಧೀಶ ಬಿ.ಶಿವಕುಮಾರ್ ತಿಳಿಸಿದರು.

ನಗರದ ಕೆಂಪಮ್ಮದೇವಿ ದೇವಾಲಯದ ಆವರಣದಲ್ಲಿ ಜಿಲ್ಲಾ ಪೊಲೀಸ್, ತಿಪಟೂರು ಉಪವಿಭಾಗದ ಪೊಲೀಸರು ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು.

ವಾಹನ ಸವಾರರು ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮ ಪಾಲಿಸದೇ, ಅನೇಕ ಅಪಘಾತಗಳು ಸಂಭವಿಸುತ್ತವೆ. ಪ್ರತಿ ವಾಹನ ಸವಾರರಿಗೂ ರಸ್ತೆ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದಾಗ ಮಾತ್ರವೇ ಸಪ್ತಾಹಕ್ಕೆ ಅರ್ಥ ಬರು
ತ್ತದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಕ್ಕೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.

ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, ‘ಪೊಲೀಸ್ ಇಲಾಖೆ ಜನಸ್ನೇಹಿಯಾಗಲು ಜಾಗೃತಿ ಮೂಡಿಸುವ ಕಾರ್ಯ
ಕ್ರಮ ಯಶಸ್ವಿಯಾಗಲಿದೆ. ಪೊಲೀಸರಿರುವುದು ಕಾನೂನು ವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಜೀವನ ರಕ್ಷಣೆ ಮಾಡುವ ಜವಬ್ದಾರಿಯಿದ್ದು, ಅದಕ್ಕಾಗಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದ್ದಾರೆ. ಪ್ರತಿಯೊಬ್ಬರು ಇದಕ್ಕೆ ಸಹಕಾರ ನೀಡಿ ನಿಯಮ ಪಾಲಸಿ’ ಎಂದರು.

ಮಾಜಿ ಶಾಸಕ ಕೆ.ಷಡಕ್ಷರಿ ಜಾಗೃತಿ ಭಿತ್ತಿಪತ್ರಗಳನ್ನು ಅನಾವರಣ ಮಾಡಿ, ‘ಕಾನೂನುಗಳು ನಮ್ಮ ರಕ್ಷಣೆ ಮಾಡುವ ಸಲುವಾಗಿ ರೂಪಿಸಿದ್ದು ಅವುಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದರು.

ಬೈಕ್ ಜಾಗೃತಿ ಜಾಥಾಕ್ಕೆ ಮಾಜಿ ಶಾಸಕ ಬಿ.ನಂಜಾಮರಿ ಚಾಲನೆ ನೀಡಿದರು. ಜಾಥಾದಲ್ಲಿ ಶಾಸಕ ಬಿ.ಸಿ.ನಾಗೇಶ್, ಮಾಜಿ ಶಾಸಕ ಕೆ.ಷಡಕ್ಷರಿ ಒಂದೇ ಬೈಕ್ನಲ್ಲಿ ಸವಾರಿ ಮಾಡಿದ್ದು, ವಿಶೇಷವಾಗಿತ್ತು. ಹೆಲ್ಮೆಟ್ ಇಲ್ಲದೆ, ವಾಹನ ಚಾಲನೆ ಮಾಡುವವರಿಗೆ ಗುಲಾಬಿ ಹೂ ನೀಡಿ ಅರಿವು ಮೂಡಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಸತೀಶ್ ಎಸ್.ಟಿ., ಪ್ರಧಾನ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್, ಅಧಿಕ ಸಿವಿಲ್ ನ್ಯಾಯಾಧೀಶ ಚಂದನ್ ಎಸ್., ತಹಶೀಲ್ದಾರ್ ಚಂದ್ರಶೇಖರ್, ನಗರಸಭೆ ಅಧ್ಯಕ್ಷ ಪಿ.ಜೆ.ರಾಮಮೋಹನ್, ಉಪಾಧ್ಯಕ್ಷ ಸೊಪ್ಪು ಗಣೇಶ್, ಪೌರಾಯುಕ್ತ ಉಮಾಕಾಂತ್, ಡಿವೈಎಸ್ಪಿ ಚಂದನ್ ಕುಮಾರ್ ಎನ್., ನಗರಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್, ಸಬ್ಇನ್ಸ್ಪೆಕ್ಟರ್ ದಾಕ್ಷಾಯಣಿ, ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಜಯಲಕ್ಷ್ಮಮ್ಮ, ಸಬ್ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಕಿಬ್ಬನಹಳ್ಳಿ ಠಾಣೆಯ ವಿಜಯಲಕ್ಷ್ಮಿ, ಹೊನ್ನವಳ್ಳಿ ಎಎಸ್ಐ ಸರ್ದಾರ್ ಸಾಬ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.