ತುಮಕೂರು: ರಾಗಿ ಕಟಾವು ಮಾಡುವ ಯಂತ್ರಕ್ಕೆ ಪ್ರತಿ ಗಂಟೆಗೆ ₹2,700 ಬಾಡಿಗೆ ನಿಗದಿಪಡಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಬಹುತೇಕ ರೈತರು ರಾಗಿ ಬೆಳೆಯನ್ನು ಯಂತ್ರಗಳ ಮೂಲಕ ಕಟಾವು ಮಾಡಿಸುತ್ತಿದ್ದು, ಪ್ರತಿ ಗಂಟೆಗೆ ₹2,700 ಮೀರದಂತೆ ಬಾಡಿಗೆ ಪಡೆದುಕೊಳ್ಳಬೇಕು. ನಿಗದಿಗಿಂತ ಹೆಚ್ಚು ಬಾಡಿಗೆ ಹಣ ತೆಗೆದುಕೊಂಡರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ 1.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಿದ್ದು, ಈಗಾಗಲೇ ಕೆಲವು ಭಾಗಗಳಲ್ಲಿ ರಾಗಿ ಬೆಳೆ ಕಟಾವು ಪ್ರಾರಂಭಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಟಾವು ಯಂತ್ರಗಳನ್ನು ತಂದು ಬೆಳೆ ಕಟಾವಿಗೆ ಹೆಚ್ಚಿನ ಮೊತ್ತ ಕೇಳುತ್ತಿರುವ ಬಗ್ಗೆ ರೈತರಿಂದ ದೂರುಗಳು ಬಂದಿವೆ. ಕೃಷಿ ಇಲಾಖೆ ಮತ್ತು ರೈತ ಮುಖಂಡರೊಂದಿಗೆ ಚರ್ಚಿಸಿ ರೈತರಿಗೆ ಆರ್ಥಿಕ ಹೊರೆಯಾಗದಂತೆ ಬೆಲೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ಕಟಾವು ಯಂತ್ರಗಳ ಕಾರ್ಯಕ್ಷಮತೆ ಪರಿಶೀಲನೆಗಾಗಿ ಕೃಷಿ ವಿಜ್ಞಾನ ಕೇಂದ್ರದ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್, ಕೃಷಿ ಇಲಾಖೆ, ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ ತಮ್ಮ ವ್ಯಾಪ್ತಿಯಲ್ಲಿರುವ ಕಟಾವು ಯಂತ್ರಗಳ ಮಾಹಿತಿ ಪಡೆದುಕೊಳ್ಳಬೇಕು. ಯಂತ್ರಗಳ ಕಾರ್ಯಕ್ಷಮತೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗಾನಂದ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಂಗಸ್ವಾಮಿ, ಕೃಷಿ ಸಹಾಯಕ ನಿರ್ದೇಶಕರಾದ ಹುಲಿರಾಜ್, ಚಂದ್ರಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.