ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಎಸ್ಸಿಪಿ, ಟಿಎಸ್ಪಿ) ಅಡಿ ಅನುಷ್ಠಾನಗೊಳಿಸಿರುವ ಯೋಜನೆಗಳಿಂದ ಫಲಾನುಭವಿಗಳ ಜೀವನ ಸುಧಾರಣೆ ಆಗಿರುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ, ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಎಸ್ಸಿಪಿ, ಟಿಎಸ್ಪಿ ಅನುಷ್ಠಾನ, ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಕುರಿತು ಶುಕ್ರವಾರ ಪ್ರಗತಿ ಪರಿಶೀಲನೆ ನಡೆಸಿದರು.

ಎಸ್ಸಿಪಿ, ಟಿಎಸ್ಪಿ ಯೋಜನೆ ಅನುಷ್ಠಾನದಿಂದ ಜನರ ಜೀವನಮಟ್ಟ ಸುಧಾರಣೆಯಾಗಿದ್ದು, ಫಲಾನುಭವಿಗಳನ್ನು ಸಂದರ್ಶಿಸಿ, ಅಭಿಪ್ರಾಯ ಸಂಗ್ರಹಿಸಿ ಸಮಗ್ರ ವರದಿ ಸಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಪರಿಶಿಷ್ಟರ ಸಮಗ್ರ ಅಭಿವೃದ್ಧಿಗಾಗಿ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ವಿಳಂಬ ಮಾಡದೆ ಫಲಾನುಭವಿಗಳನ್ನು ಆಯ್ಕೆಮಾಡಿ, ಮಂಜೂರಾದ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಯೋಜನೆಗಳು ಸಮರ್ಪಕವಾಗಿ ಜಾರಿಯಾಗದೆ ಇರುವುದು ಕಂಡು ಬಂದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ, ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಭಾರತೀನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮಳೆಯಿಂದ ಆಗಬಹುದಾದ ಹಾನಿ ತಡೆಗಟ್ಟುವ ಬಗ್ಗೆ ವಿಸ್ತೃತ ವರದಿ ಸಲ್ಲಿಸುವಂತೆ ನಿರ್ದೇಶಿಸಿದರು.

ನೋಟಿಸ್: ಎಸ್ಸಿಪಿ, ಟಿಎಸ್ಪಿ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ನೋಟಿಸ್ ಜಾರಿಗೆ ಸೂಚಿಸಿದರು.

ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಅನುಷ್ಠಾನಗೊಳಿಸಿ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಂಜಿನಿಯರ್ಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಡಿಎಚ್ಒ ಡಾ.ಡಿ.ಎನ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ಶ್ರೀಧರ್, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಜಯಣ್ಣ, ಡಿಡಿಪಿಐ ಸಿ.ನಂಜಯ್ಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಇಮ್ರಾನ್ವುಲ್ಲಾ ಖಾನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.