ತುಮಕೂರು: ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಸವಲತ್ತು ಪಡೆಯಲು ವಿವಿಧ ಅಭಿವೃದ್ಧಿ ನಿಗಮಗಳಿಗೆ 8,738 ಮಂದಿ ಅರ್ಜಿ ಸಲ್ಲಿಸಿದ್ದು, ಇದರಲ್ಲಿ 202 ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಜಿ.ಪಂ ಸಿಇಒ ಜಿ.ಪ್ರಭು ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.

ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆ, ವಿಭೂತಿ ಘಟಕ, ಭೋಜನಾಲಯ ಕೇಂದ್ರ, ಮಿಲ್ಟ್ರಿ ಹೋಟೆಲ್ ಹಾಗೂ ಇತರೆ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಅಲೆಮಾರಿ, ಅರೆ ಅಲೆಮಾರಿ ನಿಗಮದಲ್ಲಿ 3,555 ಅರ್ಜಿ ಸಲ್ಲಿಕೆಯಾಗಿದ್ದು, 20 ಜನರಿಗೆ ಮಾತ್ರ ಸೌಲಭ್ಯ ಕಲ್ಪಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಬಂದಿದ್ದ 247 ಅರ್ಜಿ ಪೈಕಿ 22, ಒಕ್ಕಲಿಗ ಅಭಿವೃದ್ಧಿ ನಿಗಮದ 1,420 ಅರ್ಜಿ ಪೈಕಿ 19, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 825 ಅರ್ಜಿಗಳಲ್ಲಿ 23, ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 819 ಅರ್ಜಿ ಪೈಕಿ 9 ಫಲಾನುಭವಿಗಳ ಅರ್ಜಿ ಆಯ್ಕೆ ಮಾಡಲಾಯಿತು.

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಲ್ಲಿ ಸಲ್ಲಿಕೆಯಾದ 308 ಅರ್ಜಿಗಳ ಪೈಕಿ 13, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ 983 ಅರ್ಜಿ ಪೈಕಿ 18, ಸವಿತಾ ಸಮಾಜ ಅಭಿವೃದ್ಧಿ ನಿಗಮದ 361 ಅರ್ಜಿಗಳಲ್ಲಿ 10, ಮರಾಠರ ಅಭಿವೃದ್ಧಿ ನಿಗಮದ 120 ಅರ್ಜಿಯಲ್ಲಿ 40, ಆರ್ಯವೈಶ್ಯ ಅಭಿವೃದ್ಧಿ ನಿಗಮದ 100 ಅರ್ಜಿಯಲ್ಲಿ 28 ಫಲಾನುಭವಿಗಳ ಅರ್ಜಿಯನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದವರಿಗೆ ₹4.5 ಕೋಟಿ ಆರ್ಥಿಕ ಸೌಲಭ್ಯ ಮಂಜೂರು ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.