ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಬದುಕಿನ ಚಿತ್ರಣವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿದ್ಧಗಂಗಾ ಮಠಕ್ಕೆ ಗುರುವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಠದ ಪರಂಪರೆ ಹಲವರಿಗೆ ಮಾದರಿಯಾಗಿದೆ. ಲಕ್ಷಾಂತರ ಮಕ್ಕಳು ಮಠದಿಂದ ವಿದ್ಯಾಭ್ಯಾಸ ಪಡೆದು ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಸ್ವಾಮೀಜಿ ಜಯಂತಿಯನ್ನು ಉತ್ಸವದಂತೆ ಆಚರಿಸಲಾಗುವುದು’ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವುದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಬಂದಿದೆ. ಕಾರ್ಯಕ್ರಮದ ಮೂಲಕ ಒಳ್ಳೆಯ ಸಂದೇಶ ಸಾರಬೇಕು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು.

ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.