ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಸಿದ್ಧಗಂಗಾ ಜಾತ್ರೆಯ ಪ್ರಯುಕ್ತ ಫೆ.26ರಿಂದ ಮಾರ್ಚ್ 11ರವರೆಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.

26ರ ಸಂಜೆ 7ಗಂಟೆಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಗುತ್ತದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೃಷಿ ಇಲಾಖೆ, ಅರಣ್ಯ, ಪಶುಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ 20 ಮಳಿಗೆ, 150 ಖಾಸಗಿ ವಾಣಿಜ್ಯ ಮಳಿಗೆ ಸೇರಿದಂತೆ ಒಟ್ಟು 170 ಮಳಿಗೆ ತೆರೆಯಲಾಗಿದೆ ಎಂದು ಸಿದ್ಧಗಂಗಾ ವಸ್ತು ಪ್ರದರ್ಶನ ಟ್ರಸ್ಟ್‌ನ ಕಾರ್ಯದರ್ಶಿ ಗಂಗಾಧರಯ್ಯ ಇಲ್ಲಿ ಶನಿವಾರ ಹೇಳಿದರು.

ಅಯೋಧ್ಯೆ ರಾಮ ಮಂದಿರದ ಮಾದರಿಯು ಸಹ ಈ ಬಾರಿಯ ವಸ್ತು ಪ್ರದರ್ಶನದಲ್ಲಿ ಗಮನ ಸೆಳೆಯಲಿದೆ. ಸ್ಥಳೀಯ ಕಲಾವಿದರು ಸೇರಿದಂತೆ ರಾಜ್ಯದ ಹೆಸರಾಂತ ನಾಟಕ ಕಂಪನಿಗಳಿಂದ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾರ್ಚ್ 8ರಂದು ಮಹಾಶಿವರಾತ್ರಿಯ ಪ್ರಯುಕ್ತ ಮಠದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಬೆಳ್ಳಿ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಜರುಗಲಿದೆ. ಮಾರ್ಚ್ 9ರಂದು ಸಿದ್ಧಲಿಂಗೇಶ್ವರ ಸ್ವಾಮಿ ರಥೋತ್ಸವ ನಡೆಯಲಿದೆ. ಮಾರ್ಚ್ 11ರಂದು ತೆಪ್ಪೋತ್ಸವದೊಂದಿಗೆ ಜಾತ್ರೆ, ವಸ್ತು ಪ್ರದರ್ಶನ ಕೊನೆಗೊಳ್ಳಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.