ತುಮಕೂರು: ಸಾಮಾಜಿಕ ಜಾಲ ತಾಣಗಳಲ್ಲಿ ಕೇವಲ ನಕಾರಾತ್ಮಕ ವಿಚಾರ ಬಿತ್ತರಿಸುತ್ತಿದ್ದು, ವಿದ್ಯಾರ್ಥಿಗಳು ಸಹ ಇಂತಹ ವಿಚಾರಗಳ ಕಡೆಗೆ ಗಮನ ಹರಿಸುತ್ತಿರುವುದು ಆತಂಕದ ವಿಚಾರ ಎಂದು ರಾಮಕೃಷ್ಣ– ವಿವೇಕಾನಂದ ಆಶ್ರಮ ಸ್ವಾಮಿ ವೀರೇಶಾನಂದ ಸರಸ್ವತಿ ಎಚ್ಚರಿಸಿದರು.

ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಈಚೆಗೆ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ಕಾನೂನು ಸೇವಾ ಕೇಂದ್ರ, ಯೂಥ್ ರೆಡ್ಕ್ರಾಸ್, ರೆಡ್ರಿಬ್ಬನ್ ಕ್ಲಬ್ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡದಿದ್ದರೆ ದೇಶದ ಅಭಿವೃದ್ಧಿಗೆ ತೊಡಕಾಗಲಿದೆ. ಸ್ವಾಮಿ ವಿವೇಕಾನಂದರ ತತ್ವ, ಸಂದೇಶಗಳನ್ನು ಶಾಲಾ, ಕಾಲೇಜುಗಳಲ್ಲಿ ತಿಳಿಸುವ ಮೂಲಕ ಉತ್ತಮ ಸಂಸ್ಕಾರ, ಮೌಲ್ಯಯುತ ಶಿಕ್ಷಣ ನೀಡಬೇಕಿದೆ ಎಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಿಂಜರಿಕೆ ಹಾಗೂ ಕಷ್ಟಗಳ ಬಗ್ಗೆ ಚಿಂತಿಸುವುದನ್ನು ಬಿಡಬೇಕು. ಕಷ್ಟದಲ್ಲೇ ಬೆಳೆದು ಸಾಧನೆ ಮಾಡಿದ ವಿಶ್ವೇಶ್ವರಯ್ಯ ಅವರಂತಹ ವ್ಯಕ್ತಿಗಳ ಜೀವನ ಚರಿತ್ರೆಯನ್ನು ತಿಳಿಯುವ ಮೂಲಕ ನೀವೂ ಸಾಧನೆ ಮಾಡಬೇಕು ಎಂದು ಹೇಳಿದರು.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಎಚ್.ಎಸ್.ರಾಜು, ಸಿಇಒ ಪ್ರೊ.ಕೆ.ಚಂದ್ರಣ್ಣ, ಪ್ರಾಂಶುಪಾಲರಾದ ಶಮಾಸೈಯಿದಿ, ಐಕ್ಯೂಎಸಿ ಸಮನ್ವಯಾಧಿಕಾರಿ ಎನ್.ಎಚ್.ಕುಮಾರ್ ಉಪಸ್ಥಿತರಿದ್ದರು.

ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕಗಳಿಸಿದ, ಕ್ರೀಡೆ, ಎನ್ಎಸ್ಎಸ್ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.