ತುಮಕೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತುಮಕೂರಿನಲ್ಲೂ ಪ್ರತಿಭಟನೆ ನಡೆಸಲು ಮಾಜಿ ಶಾಸಕರಿಬ್ಬರು ಮುಸ್ಲಿಂ ಜನರಿಗೆ ಕುಮ್ಮಕ್ಕು ನೀಡುತ್ತಿದ್ದು, ಪೊಲೀಸರು ಇದಕ್ಕೆ ಅವಕಾಶ ನೀಡಬಾರದು ಹಾಗೂ ಮುಸ್ಲಿಂ ಬಾಂಧವರು ಯಾವುದೇ ಕಾರಣಕ್ಕೂ ಪ್ರತಿಭಟನೆಯಲ್ಲಿ ಭಾಗವಹಿಸಬಾರದು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಮನವಿ ಮಾಡಿದರು.

ರಾಜ್ಯದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವುದು ಸರಿಯಲ್ಲ. ಕೇಂದ್ರ ಸರ್ಕಾರ ತಂದಿರುವ ಕಾನೂನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಮುಖಂಡರ ಕುಮ್ಮಕ್ಕಿದೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಕಾಂಗ್ರೆಸ್, ಕಮ್ಯುನಿಷ್ಟ್, ಎಸ್‍ಎಫ್‍ಐ ಮತ್ತಿತರರು ದೇಶದ್ರೋಹಿ ಕೆಲಸ ಮಾಡಲು ಆರಂಭಿಸಿದ್ದಾರೆ. ಇವರ ಮಾತನ್ನು ನಾಗರಿಕರು ಕೇಳಬಾರದು, ನಮ್ಮ ದೇಶದ ಮುಸ್ಲಿಂ ಬಂಧುಗಳಿಗೆ ಕಾಯ್ದೆಯಿಂದ ಯಾವುದೇ ತೊಂದರೆ ಇಲ್ಲ. ಆದರೆ, ಮುಸ್ಲಿಂ ಜನರು ಕಾಂಗ್ರೆಸ್ ಹಾಗೂ ಕಮ್ಯುನಿಷ್ಟ್‌ಗಳ ಜತೆಗಿದ್ದರೆ ಮುಂದಿನ ದಿನದಲ್ಲಿ ದೇಶಕ್ಕೆ ಗಂಡಾಂತರ ಬರಲಿದೆ. ಕೂಡಲೇ ಎಚ್ಚೆತ್ತುಕೊಂಡು ಸಹಿಷ್ಣುತೆಯಿಂದ ಬಾಳಬೇಕು ಎಂದರು.

ಬಿಜೆಪಿ ಮುಖಂಡ ಎಂ.ಬಿ.ನಂದೀಶ್ ಮಾತನಾಡಿ, ‘ಅನೇಕರಿಗೆ ಪ್ರತಿಭಟನೆ ಯಾವ ಉದ್ದೇಶಕ್ಕೆ ಮಾಡುತ್ತಿದ್ದೇವೆ ಎಂಬ ಸ್ಪಷ್ಟತೆ ಇಲ್ಲ. ದೇಶಕ್ಕೆ ನುಸುಳಿಕೊಂಡು ಬಂದಿರುವವರ ವಿರುದ್ಧ ಕಾನೂನು ರೂಪಿಸಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದರಿಲ್ಲಿ ಅರ್ಥವಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.