ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ನಿರ್ಮಿಸಿರುವ ಗ್ರಂಥಾಲಯದ ಕಟ್ಟಡ ಮಳೆ ಬಂದಾಗ ಪ್ರತಿ ಸಾರಿಯೂ ತೊಟ್ಟಿಕ್ಕುತ್ತಿದೆ. ಪುಸ್ತಕಗಳನ್ನು ರಕ್ಷಿಸುವುದೇ ಸವಾಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಸೇರಿ ಇಡೀ ಕಟ್ಟಡ ಸೋರುತ್ತಿದೆ. ಪಿಎಸ್ಐ, ಕಾನ್ಸ್ಟೇಬಲ್, ಬ್ಯಾಂಕಿಂಗ್ ಒಳಗೊಂಡಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಪ್ರತಿ ನಿತ್ಯ ಇಲ್ಲಿಗೆ ಭೇಟಿ ನೀಡುತ್ತಾರೆ. ಗ್ರಾಮೀಣ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಮಳೆಗಾಲದಲ್ಲಿ ಗ್ರಂಥಾಲಯದಲ್ಲಿ ಕುಳಿತು ಅಭ್ಯಾಸ ಮಾಡಲು ತುಂಬಾ ಸಮಸ್ಯೆಯಾಗುತ್ತಿದೆ. ಕಟ್ಟಡ ಸೋರುತ್ತಿರುವುದರಿಂದ ತುಂಬಾ ಕಿರಿಕಿರಿಯಾಗುತ್ತಿದೆ.

ಹತ್ತಾರು ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಗ್ರಂಥಾಲಯವನ್ನೇ ಅವಲಂಬಿಸಿದ್ದಾರೆ. ಅಧಿಕಾರಿಗಳು ಇತ್ತ ಗಮನ ಹರಿಸಿ ಕಟ್ಟಡ ಸೋರುವುದನ್ನು ತಡೆಯಲು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ನೂರಾರು ಪುಸ್ತಕಗಳು ನೀರಿನಲ್ಲಿ ತೊಯ್ದು ಹಾಳಾಗುತ್ತಿವೆ.

‘ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಆದರೆ ಯಾರೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಕೇವಲ ನಾಮಕಾವಸ್ತೆ ಎಂಬಂತೆ ಗ್ರಂಥಾಲಯ ನಡೆಸುತ್ತಿದ್ದಾರೆ’ ಎಂದು ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದ ಯುವಕರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.