ತುಮಕೂರು: ತಾಲ್ಲೂಕಿನ ಹಿಂದುಳಿದ ವರ್ಗಗಳ (ಬಿಸಿಎಂ) ವಿದ್ಯಾರ್ಥಿ ನಿಲಯಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಪ್ರಕರಣದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ.

ಗಂಗಪ್ಪ ಅವರ ಜಾಗಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಯು.ಸೋನಿಯಾ ವರ್ಣೇಕರ್ ಅವರನ್ನು ವರ್ಗಾವಣೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬುಧವಾರ ಆದೇಶಿಸಿದೆ.

ಗಂಗಪ್ಪ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ. ಇಲಾಖೆ ಕೇಂದ್ರ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಈಗಾಗಲೇ ಅಮಾನತು ಮಾಡಲಾಗಿದೆ.

‘ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ’ ಸುದ್ದಿ ಫೆ. 19ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿತ್ತು.
.ಬಿಸಿಎಂ ಹಾಸ್ಟೆಲ್‌ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ! .ಸಿದ್ಧಗಂಗಾ ಮಠದಿಂದ BCM ಹಾಸ್ಟೆಲ್‌ಗಳಿಗೆ ಅಕ್ಕಿ ಸಾಲ ಕೇಳಿದ್ದ ಅಧಿಕಾರಿ ಅಮಾನತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.