ತುಮಕೂರು: ತಿಂಗಳಿಗೆ ಒಮ್ಮೆ ನಡೆಯುವ ಜನತಾ ದರ್ಶನ ಈ ಬಾರಿ ಶಿರಾದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಡಿ. 16ರಂದು ನಡೆಯಲಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಈ ಮಾಹಿತಿ ನೀಡಿದರು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಲು ಇಲಾಖಾವಾರು ಕೌಂಟರ್‌ಗಳನ್ನು ತೆರೆಯಲು ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಿದರು.

ಜಿಲ್ಲೆಯನ್ನು ಬರ ಕಾಡುತ್ತಿದ್ದು, ಬೇಸಿಗೆ ಸಮೀಪಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದು. ಈಗಿನಿಂದಲೇ ಎಚ್ಚರ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಜನತಾ ದರ್ಶನದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಕುಣಿಗಲ್, ಕೊರಟಗೆರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಬಂದಿರುವ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.