ತುಮಕೂರು: ಕಾಂಗ್ರೆಸ್ ನಾಯಕರಿಗೆ ತಮ್ಮ ಗ್ಯಾರಂಟಿ ಯೋಜನೆ ಬಗ್ಗೆ ವಿಶ್ವಾಸವಿಲ್ಲ. ಹಾಗಾಗಿ ಚೊಂಬಿನ ಜಾಹೀರಾತು ನೀಡಿ ಕೇಂದ್ರ ಸರ್ಕಾರ ಬರ ಪರಿಹಾರ ಕೊಡುತ್ತಿಲ್ಲವೆಂದು ದೂರುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್ ಆರೋಪಿಸಿದರು.

ಇಷ್ಟು ದಿನ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ಮಾಡುತ್ತಿದ್ದರು. ಪ್ರಚಾರ ಫಲ ಕೊಡದೆ ಈಗ ಚೊಂಬಿನ ಮುಖಾಂತರ ಮತ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ನವರು ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಮೋದಿ ಸರ್ಕಾರ ಕೊಡುವ 5 ಕೆ.ಜಿ ವಿತರಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಅಕ್ಕಿ ಎಲ್ಲಿ ಹೋಯಿತು? ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

5 ಕೆ.ಜಿ ಅಕ್ಕಿ ಬದಲು ಹಣ ಕೊಡುತ್ತಿದ್ದಾರೆ. ಅವರು ಹಾಕುವ ದುಡ್ಡು 3 ಕೆ.ಜಿ ಅಕ್ಕಿಗೆ ಸಾಕಾಗುತ್ತದೆ. ಎಲ್ಲರಿಗೂ ಉಚಿತವಾಗಿ 200 ಯುನಿಟ್ ವಿದ್ಯುತ್ ಕೊಡುತ್ತೇವೆ ಎಂಬ ಭರವಸೆ ನೀಡಿ, ಚುನಾವಣೆಯ ನಂತರ ಮಾನದಂಡ ಬದಲಿಸಿದರು. ಯುವ ನಿಧಿ ವಿಷಯದಲ್ಲೂ ಹೀಗೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಸುಳ್ಳಿನ ಸರದಾರರು ಟೀಕಿಸಿದರು.

ಬರಗಾಲದಲ್ಲಿ ಜನರಿಗೆ ಕುಡಿಯುವ ನೀರು ಕೊಡಲು ಆಗುತ್ತಿಲ್ಲ. ಬರ ಪರಿಹಾರ ನೀಡದೆ ಕೇಂದ್ರ ಸರ್ಕಾರವನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದಾರೆ. ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರದ ನೆರವು ಕೇಳದ ರೈತರ ಸಾಲ ಮನ್ನಾ ಮಾಡಿದ್ದರು. ಕಾಂಗ್ರೆಸ್ಗೆ ಅಂತಹ ಇಚ್ಛಾಶಕ್ತಿ ಇಲ್ಲ ಎಂದರು.

ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ. ಅವರಿಗೆ ಮತ್ತಷ್ಟು ಶಕ್ತಿ ತುಂಬಲು ತುಮಕೂರಿನಲ್ಲಿ ವಿ.ಸೋಮಣ್ಣ ಅವರನ್ನು ಗೆಲ್ಲಿಸಬೇಕು. ಎಲ್ಲಾ ವರ್ಗದ ಜನ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಮುಖಂಡರಾದ ಬಿ.ಕೆ.ಮಂಜುನಾಥ್, ಟಿ.ಕೆ.ನರಸಿಂಹಮೂರ್ತಿ, ಪುಟ್ಟರಾಜು, ರವೀಶ್ ಜಹಾಂಗೀರ್, ಮಂಜುನಾಥ್, ಲಕ್ಷ್ಮಿನರಸಿಂಹರಾಜು, ಶಂಕರ್, ಇಂದ್ರಕುಮಾರ್, ಮಲ್ಲಿಕಾರ್ಜುನ್, ಲಕ್ಷ್ಮಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.