ಭಾನುವಾರ, 29 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಕಾರು ಅಡ್ಡಗಟ್ಟಿ 350 ಕೆ.ಜಿ ಬೆಳ್ಳಿ, ₹1 ಕೋಟಿ ನಗದು ದೋಚಿದ ತಂಡ

Published : 28 ಸೆಪ್ಟೆಂಬರ್ 2024, 15:43 IST
Last Updated : 28 ಸೆಪ್ಟೆಂಬರ್ 2024, 15:43 IST
ಫಾಲೋ ಮಾಡಿ
Comments

ತುಮಕೂರು: ತಾಲ್ಲೂಕಿನ ನೆಲಹಾಳ್‌ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಬೆಳಗಿನ ಜಾವ ಕಾರು ಅಡ್ಡಗಟ್ಟಿ 350 ಕೆ.ಜಿ ಬೆಳ್ಳಿ ಗಟ್ಟಿ, ₹1 ಕೋಟಿ ಹಣ ದರೋಡೆ ಮಾಡಲಾಗಿದೆ.

ತಮಿಳುನಾಡಿನ ಸೇಲಂ ನಗರದ ಬೆಳ್ಳಿ ಆಭರಣ ವರ್ತಕ ಅನಿಲ್‌ ಮಹದೇವ್‌ ಎಂಬುವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬೆಳ್ಳಿ ಗಟ್ಟಿ ಖರೀದಿಸಿ ಕಾರಿನಲ್ಲಿ ಸೇಲಂಗೆ ಕೊಂಡೊಯ್ಯುತ್ತಿದ್ದರು. ಮಗ ಬಾಲಾಜಿ, ಸ್ನೇಹಿತರಾದ ಗಣೇಶ್‌, ವಿನೋದ್‌ ಜತೆಗಿದ್ದರು. ದಾರಿ ಮಧ್ಯೆ ಮೂರು ಕಾರುಗಳಲ್ಲಿ ಬಂದ ಏಳೆಂಟು ಮಂದಿ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಬಾಲಾಜಿ, ಗಣೇಶ್‌, ವಿನೋದ್‌ ಕಾರಿನಿಂದ ಇಳಿದು ತಪ್ಪಿಸಿಕೊಂಡಿದ್ದಾರೆ.

ದರೋಡೆಕೋರರು ಅನಿಲ್‌ ಅವರನ್ನು ಕಾರು ಸಮೇತ ಅಪಹರಿಸಿಕೊಂಡು ಹೋಗಿದ್ದಾರೆ. ಸ್ವಲ್ಪ ದೂರ ಕರೆದೊಯ್ದು ಕೋರ ಪೊಲೀಸ್ ಠಾಣೆ ವ್ಯಾಪ್ತಿಯ ಅಜ್ಜೇನಹಳ್ಳಿ ಬಳಿ ಅನಿಲ್‌ ಮತ್ತು ಕಾರನ್ನು ಬಿಟ್ಟು, ಹಣ ಮತ್ತು ಬೆಳ್ಳಿ ಗಟ್ಟಿಗಳೊಂದಿಗೆ ಪರಾರಿಯಾಗಿದ್ದಾರೆ. ಈ ಬಗ್ಗೆ ಅನಿಲ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಹತ್ತು ವರ್ಷದಿಂದ ಅನಿಲ್‌ ಬೆಳ್ಳಿ ಆಭರಣ ವ್ಯಾಪಾರ ಮಾಡುತ್ತಿದ್ದು, ಸೇಲಂನಲ್ಲಿ ಆಭರಣ ಮಾರಾಟ ಮಳಿಗೆ ಹೊಂದಿದ್ದಾರೆ. ಕೊಲ್ಹಾಪುರದಿಂದ ಬೆಳ್ಳಿ ಗಟ್ಟಿ ಖರೀದಿಸಿ, ಆಭರಣ ತಯಾರಿಸಿ ಮಾರಾಟ ಮಾಡುತ್ತಾರೆ.

ದರೋಡೆಕೋರರು ಎಲ್ಲಿಂದ ಹಿಂಬಾಲಿಸಿಕೊಂಡು ಬಂದಿದ್ದರು, ಅವರಿಗೆ ಬೆಳ್ಳಿ ಗಟ್ಟಿ ಸಾಗಿಸುತ್ತಿರುವ ಮಾಹಿತಿ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT