ತುಮಕೂರು: ಮುಂದಿನ ಚುನಾವಣೆಗೆ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ 22,67,153 ಮತದಾರರಿದ್ದಾರೆ.

2,615 ಮತಗಟ್ಟೆಗಳಲ್ಲಿ 11,25,351 ಪುರುಷರು, 11,41,711 ಮಹಿಳೆಯರು ಹಾಗೂ 91 ಇತರೆ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಮುಖಂಡರ ಜತೆ ನಡೆದ ಸಭೆಯಲ್ಲಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ 41,658 ಯುವಕರು, 29,261 ಅಂಗವಿಕಲರು, 742 ಸೇವಾ ಹಾಗೂ 7,718 ಗಣ್ಯ ಮತದಾರರು ಸೇರಿದಂತೆ ಒಟ್ಟು 22,67,153 ಮತದಾರ ಇದ್ದಾರೆ ಎಂದು ಹೇಳಿದರು.

ನಿಗದಿತ ನಮೂನೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ, ಸಹಾಯಕ ಚುನಾವಣಾಧಿಕಾರಿ ಕಚೇರಿ, ಚುನಾವಣಾಧಿಕಾರಿ ಕಚೇರಿ ಹಾಗೂ ceo.karnataka.gov.in ಮತ್ತು tumkur.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದರು.

ಅರ್ಹ ಮತದಾರರ ಹೆಸರು ಬಿಟ್ಟು ಹೋಗಿದ್ದಲ್ಲಿ ನಮೂನೆ-6 ಹಾಗೂ ತಿದ್ದುಪಡಿಗೆ ನಮೂನೆ-8ರಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.