ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಲ್ ರಾಗಿಗೆ ₹4,290 ನಿಗದಿ ಪಡಿಸಿದ್ದು, ರಾಗಿ ಖರೀದಿಗೆ ಜಿಲ್ಲೆಯ ವಿವಿಧೆಡೆ 10 ಖರೀದಿ ಕೇಂದ್ರ ಸ್ಥಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕುಣಿಗಲ್ ತಾಲ್ಲೂಕಿನಲ್ಲಿ 2, ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಗುಬ್ಬಿ ತಾಲ್ಲೂಕು ಹಾಗೂ ಹುಳಿಯಾರಿನಲ್ಲಿ ತಲಾ ಒಂದು ಸೇರಿ ಒಟ್ಟು 10 ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲಾಗುತ್ತದೆ. ರಾಗಿ ಖರೀದಿಗೆ ಡಿ. 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. 2025ರ ಜನವರಿ 1ರಿಂದ ಮಾರ್ಚ್ 31ರ ವರೆಗೆ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ.

‘ರಾಗಿ ಮಾರಾಟಕ್ಕೆ ನೋಂದಣಿ ಮಾಡಿಕೊಳ್ಳಲು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್ ಹಾಜರುಪಡಿಸಬೇಕು. ರಾಗಿ ಖರೀದಿ ಹಂತದಲ್ಲಿ ಎಫ್ಎಕ್ಯೂ ಗುಣಮಟ್ಟ ಪರಿಶೀಲಿಸಿ ದೃಢೀಕರಿಸಲು ಪ್ರತಿ ಖರೀದಿ ಕೇಂದ್ರಕ್ಕೆ ತಲಾ ಒಬ್ಬ ಪರಿವೀಕ್ಷಕರನ್ನು ನೇಮಿಸಬೇಕು’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು. ಜಂಟಿ ಕೃಷಿ ನಿರ್ದೇಶಕ ರಮೇಶ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.