ತಿಪಟೂರು: ತಾಲ್ಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತಪಟ್ಟವರು.

ನಗರಕ್ಕೆ ಹೊಂದಿಕೊಂಡಿರುವ ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಎನ್ನಲಾಗಿದೆ.

ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಿಗ್ಗೆ ಇಬ್ಬರು ಬಾಲಕರ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಶಾಸಕ ಕೆ.ಷಡಕ್ಷರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.