ತುಮಕೂರು: ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಿಪಟೂರು ತಾಲ್ಲೂಕಿನ ಮಡೇನೂರು ವೃತ್ತದ ಗ್ರಾಮ ಆಡಳಿತಾಧಿಕಾರಿ (ವಿ.ಎ) ಕೆ.ಎಂ.ರವಿಶಂಕರ್ಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ.

ಮಡೇನೂರು ಅಯ್ಯನಭಾವಿ ಗ್ರಾಮದ ಬಿ.ಉಮೇಶ್ ಎಂಬುವರಿಗೆ ₹30 ಸಾವಿರ ಲಂಚ ಕೇಳಿ, ನಂತರ ₹15 ಸಾವಿರಕ್ಕೆ ಒಪ್ಪಿಕೊಂಡಿದ್ದರು.

ಉಮೇಶ್ 2019ರ ಸೆ. 10ರಂದು ಫೋನ್ ಪೇ ಮುಖಾಂತರ ₹5 ಸಾವಿರ ವರ್ಗಾಯಿಸಿದ್ದರು. ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದೆ ಸೆ.15ರಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಠಾಣೆಯಲ್ಲಿ ದೂರು ನೀಡಿದ್ದರು. ಎಸಿಬಿ ಡಿವೈಎಸ್ಪಿ ಬಿ.ಉಮಾಶಂಕರ್ ಪ್ರಕರಣ ದಾಖಲಿಸಿಕೊಂಡಿದ್ದರು.

ಸೆ.15ರಂದು ತಿಪಟೂರಿನಲ್ಲಿ ₹5 ಸಾವಿರ ಲಂಚ ಪಡೆಯುವಾಗ ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಎಸಿಬಿ ಇನ್ಸ್ಪೆಕ್ಟರ್ಗಳಾದ ಎಚ್.ಸುನೀಲ್ಕುಮಾರ್, ಎಸ್.ವಿಜಯಲಕ್ಷ್ಮಿ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಬುಧವಾರ ಪ್ರಕರಣದ ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಎನ್.ಬಿ.ಬಸವರಾಜು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.