ತುರುವೇಕೆರೆ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (ಕೆಎಫ್ಸಿಎಸ್ಸಿ) ಸಗಟು ಮಳಿಗೆ ವ್ಯವಸ್ಥಾಪಕ ಆರ್.ರವಿಕುಮಾರ್ (59) ಮಂಗಳವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ಎಲ್ಲ ಸೊಸೈಟಿ, ವಿವಿಧ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಸೇರಿದಂತೆ ಇನ್ನಿತರ ಆಹಾರ ಪದಾರ್ಥ ಸರಬರಾಜು ಮಾಡುವ ಸಗಟು ನಿರ್ವಾಹಕ ಅಧಿಕಾರಿಯಾಗಿ ಅವರು ಕೆಲಸ ಮಾಡುತ್ತಿದ್ದರು.

ಶಿರಾ ತಾಲ್ಲೂಕಿನ ದೇವನಹಳ್ಳಿ ರವಿಕುಮಾರ್, ಪಟ್ಟಣದ ಮಾಯಸಂದ್ರ ರಸ್ತೆ ಓಂಕಾರ್ ಆಸ್ಪತ್ರೆ ಹಿಂಭಾಗದ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ಹಲವು ದಿನಗಳಿಂದ ವಾಸವಾಗಿದ್ದರು. ಅವರ ಕುಟುಂಬ ತುಮಕೂರಿನಲ್ಲಿ ನೆಲಸಿದೆ.

ಮಂಗಳವಾರ ಬೆಳಿಗ್ಗೆ ಕರೆ ಮಾಡಿದರೂ ಸ್ವೀಕರಿಸದ ಕಾರಣ ಪತ್ನಿ, ಪತಿ ವಾಸವಾಗಿದ್ದ ಬಾಡಿಗೆ ಮನೆಗೆ ಬಂದು ವಿಚಾರಿಸಿದ್ದಾರೆ. ಅನುಮಾನಗೊಂಡು ಮನೆ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.