ಉಡುಪಿ: ಕೋವಿಡ್ ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳ ಅಪೌಷ್ಟಿಕತೆ ನೀಗಿಸಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾರ್ಕಳದಲ್ಲಿ ಸೋಮವಾರ ‘ವಾತ್ಸಲ್ಯ’ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೊಳಪಡುವ ಎಲ್ಲ ಹಳ್ಳಿಗಳಿಗೆ ವೈದ್ಯರು ಹಾಗೂ ಅಧಿಕಾರಿಗಳ ತಂಡ ಭೇಟಿನೀಡಿ, ಸಮೀಪದ ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಸಲಿದ್ದಾರೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್ಗಳನ್ನು ವಿತರಿಸಲಾಗುವುದು. ಆರೋಗ್ಯ ಇಲಾಖೆಯಿಂದ ವಿಟಮಿನ್ ಮಾತ್ರೆ ಹಾಗೂ ಟಾನಿಕ್ ನೀಡಲಾಗುವುದು. ಕೊರೊನಾ ಮೂರನೇ ಅಲೆ ಎದುರಿಸುವ ಶಕ್ತಿ ಮಕ್ಕಳಿಗೆ ಬರಬೇಕು ಎಂಬ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.