ಉಡುಪಿ: ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೊ ಚಿತ್ರೀಕರಣ ಮಾಡಿ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

‘ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೊ ಚಿತ್ರೀಕರಿಸಿದ್ದರು. ಅದನ್ನು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದರು. ಇದು ಗೊತ್ತಾಗುತ್ತಿದ್ದಂತೆ ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಇವರ ಮಧ್ಯೆ ತೀವ್ರತರದ ವಾಗ್ವಾದ ನಡೆದಿತ್ತು. ಆಸ್ಪತ್ರೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರುಗಿಸಿದೆ’ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.