ಪಡುಬಿದ್ರಿ: ಕಾಪುವಿನ ಹೊಸ ಮಾರಿಗುಡಿ ಕ್ಷೇತ್ರಕ್ಕೆ ಬಹುಭಾಷಾ ತಾರೆ ಜಯಪ್ರದಾ ಮಂಗಳವಾರ ಭೇಟಿ ನೀಡಿ, ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ದೇವಸ್ಥಾನದಿಂದ ಗೌರವ ಸ್ವೀಕರಿಸಿ ಬಳಿಕ ಕನ್ನಡದಲ್ಲೇ ಮಾತನಾಡಿದ ಅವರು, ‘ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೊದ್ಧಾರ ಕಾರ್ಯ ಖುಷಿ ತಂದಿದೆ. ಈ ಮಣ್ಣಿನ ಹಾಗೂ ಸಮಾಜದ ಜನರ ಪ್ರೀತಿಗೆ ಅಭಾರಿಯಾಗಿದ್ದೇನೆ. ದೇವಿಯ ಕೃಪೆ ನಮ್ಮೆಲ್ಲರ ಮೇಲಿರಬೇಕು. ಭಕ್ತರು ಹಾಗೂ ಸಮಿತಿ ಸಂಕಲ್ಪಿಸಿರುವ ಭವ್ಯವಾದ ಹೊಸ ಮಾರಿಗುಡಿ ದೇವಸ್ಥಾನದ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುತ್ತೇನೆ’ ಎಂದರು.

ದೈವನರ್ತಕ ಗುಡ್ಡ ಪಾಣಾರ, ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ, ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಪಾಲನ್, ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಅನಿಲ್ ಬಳ್ಳಾಲ್, ಹರೀಶ್ ಶೆಟ್ಟಿ ಎರ್ಮಾಳು, ನಿರ್ಮಲ್ಕುಮಾರ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀಣೋದ್ಧಾರ ಸಮಿತಿ ಪ್ರಮುಖ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.