ಉಡುಪಿ: ಮೊಬೈಲ್ ಕವರ್ನ ಹಿಂದೆ ತುಳಸಿ ದಳಗಳನ್ನು ಇಟ್ಟುಕೊಂಡರೆ ರೇಡಿಯೇಷನ್ನಿಂದ ರಕ್ಷಣೆ ಪಡೆಯಬಹುದು ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದರು.

ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯುತ್ತಿರುವ ಬೃಹತ್ ಯೋಗ ಶಿಬಿರದಲ್ಲಿ, ರೇಡಿಯೇಷನ್ನಿಂದ ಹೇಗೆ ರಕ್ಷಣೆ ಪಡೆಯಬಹುದು ಎಂಬುದನ್ನು ಮಠದ ಸಿಬ್ಬಂದಿಯೊಬ್ಬರ ಮೊಬೈಲ್ ಪಡೆದುಕೊಂಡು ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು.

ಮನೆಯಲ್ಲಿರುವ ಟಿವಿ, ಲ್ಯಾಪ್ಟಾಪ್, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ವಿಕಿರಣಗಳನ್ನು ಹೊರಸೂಸುತ್ತವೆ. ಇದರಿಂದ ರಕ್ಷಣೆ ಪಡೆಯಬೇಕಾದರೆ ಮನೆಯಲ್ಲಿ ತುಳಸಿ ಗಿಡವನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ತುಳಸಿ ದಳ ಬಳಸಿ ರೇಡಿಯೇಷನ್ನಿಂದ ರಕ್ಷಣೆ ಪಡೆಯಬಹುದು ಎಂಬ ವಿಚಾರವನ್ನು ಇದೇ ಮೊದಲ ಬಾರಿಗೆ ಬಹಿರಂಗಗೊಳಿಸುತ್ತಿರುವುದಾಗಿಯೂ ಬಾಬಾ ರಾಮದೇವ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.