ಬೈಂದೂರು: ಇಲ್ಲಿನ ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಆ. 25ರಂದು ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ‘ಕೆಸರಲ್ಲೊಂದು ದಿನ - ಗಮ್ಮತ್ತ್’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮುಂದಾಳು, ಉದ್ಯಮಿ ಶರತ್ ಶೆಟ್ಟಿ ಉಪ್ಪುಂದ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಎಂಬ ಸಂಸ್ಥೆ ಆರಂಭಿಸಿ ಅದರ ಮೂಲಕ ಮೊದಲ ಬಾರಿಗೆ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದೆ. ವಿಜೇತರಿಗೆ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರ ನೀಡಲಾಗುತ್ತಿದೆ ಎಂದರು.

ವಿವಿಧ ಸ್ಪರ್ಧೆಗಳು: ಪುರುಷರಿಗೆ ಹಗ್ಗ ಜಗ್ಗಾಟ, ವಾಲಿಬಾಲ್, ಕೆಸರ್ ಗದ್ದೆ ಓಟ, ಅಡಿಕೆ ಹಾಳಿಯಲ್ಲಿ ಎಳೆಯುವುದು ಇರಲಿದ್ದು, ಮಹಿಳೆಯರಿಗೆ ಹಗ್ಗಜಗ್ಗಾಟ, ಥ್ರೋಬಾಲ್, ಕೆಸರ್ ಗದ್ದೆ ಓಟ, ಮಡ್ಲ್ ನೇಯುವ, ಅಡಿಕೆ ಹಾಳಿಯಲ್ಲಿ ಎಳೆಯುವ ಸ್ಪರ್ಧೆ ಆಯೋಜಿಸಲಾಗಿದೆ.

ಮಕ್ಕಳಿಗೆ ಕೆಸರ್ ಗದ್ದೆ ಓಟ, ಬೆನ್ ಚೆಂಡ್ ಆಟ, ಲಿಂಬೆ ಚಮಚ ಓಟ, ಗೂಟಕ್ಕೆ ಸುತ್ತಿ ಓಡುವುದು, ಕುಂದಾಪ್ರ ಕನ್ನಡ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ ಎಂದರು.

ಹಲವು ಕಾರ್ಯಕ್ರಮಗಳು: ಸಾಂಪ್ರದಾಯಿಕ ಶೈಲಿಯಲ್ಲಿ ಉದ್ಘಾಟನೆ ಇರಲಿದ್ದು, ಇದಕ್ಕೂ ಮೊದಲು ಯಡ್ತರೆ ಬೈಪಾಸಿನಿಂದ ಮೆರವಣಿಗೆ, 5 ಜೊತೆ ಕಂಬಳ ಕೋಣಗಳ ಓಟ, ಸಾಂಕೇತಿಕ ಕಬಡ್ಡಿ ಆಟ, ನಟ ಪ್ರಮೋದ್ ಶೆಟ್ಟಿ ಸೇರಿದಂತೆ ಸಿನಿ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿ, ಮನು ಹಂದಾಡಿ, ಚೇತನ್ ನೈಲಾಡಿ ಅವರ ಹಾಸ್ಯ, ಕುಂದಾಪ್ರ ಕನ್ನಡ ಶೈಲಿಯ ಊಟ, ವಿವಿಧ ಖಾದ್ಯಗಳು, ಸೆಲ್ಫಿ ಪಾಯಿಂಟ್, ಪಕ್ಕದ ಹೊಳೆಯಲ್ಲಿ ಬೋಟಿಂಗ್ ಸೇರಿದಂತೆ ಹಲವು ವಿಶೇಷತೆ ಒಳಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲ್ಲೂಕು, ಪೃಥ್ವಿ ಕ್ರೀಡಾ ಮತ್ತು ಯುವಕ ಸಂಘ ಬೈಂದೂರು, ಫ್ರೆಂಡ್ಸ್ ಕ್ಲಬ್ ಉಪ್ಪುಂದ, ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 9ಕ್ಕೆ ಮೆರವಣಿಗೆ ಜರುಗಲಿದ್ದು, ಮಕ್ಕಳ ಸ್ಪರ್ಧೆಗಳಿಗೆ ಬೆಳಿಗ್ಗೆ 9ರ ತನಕ ಸ್ಥಳದಲ್ಲಿಯೇ ನೋಂದಣಿ ಇರಲಿದೆ.

ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಪ್ರಮುಖರಾದ ಸುಬ್ರಹ್ಮಣ್ಯ ಜಿ. ಉಪ್ಪುಂದ, ದಿವಾಕರ ಶೆಟ್ಟಿ ಉಪ್ಪುಂದ, ಪ್ರಿಯದರ್ಶಿನಿ ಬೆಸ್ಕೂರು, ಪ್ರಸಾದ್ ಪ್ರಭು ಶಿರೂರು, ರಾಮ ಬಿಜೂರು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಅರುಣ್ ಕುಮಾರ್ ಶಿರೂರು, ಕಿಶೋರ್ ಸಸಿಹಿತ್ಲು, ಸುನಿಲ್ ಎಚ್.ಜಿ ಬೈಂದೂರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.