ಉಡುಪಿ: ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್ನ ಮಲ್ಪೆ ಶಾಖೆಯಲ್ಲಿ ಸಾಲ ನೀಡುವ ವಿಚಾರದಲ್ಲಿ ನಡೆದ ಅವ್ಯವಹಾರದ ಕುರಿತು ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆ ನಡೆಯಬೇಕು ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಯಾರು ಅವ್ಯವಹಾರ ಮಾಡಿದ್ದಾರೋ ಅವರಿಂದ ಆ ಹಣ ವಸೂಲಿ ಮಾಡಿ ಸಂತ್ರಸ್ತರಿಗೆ ನೀಡಬೇಕು. ಇಲ್ಲದಿದ್ದರೆ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಈ ವಿಚಾರವಾಗಿ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಇದೇ 9ರಂದು ಬರುವಂತೆ ಬ್ಯಾಂಕ್ನ ಅಧಿಕಾರಿಗಳು ನನ್ನನ್ನು ಆಹ್ವಾನಿಸಿದ್ದಾರೆ. ನಾನು ಪ್ರಕರಣದ ಸಂತ್ರಸ್ತರನ್ನು ಅಂದು ಬೆಳಿಗ್ಗೆ 9.30ಕ್ಕೆ ದೇವಸ್ಥಾನಕ್ಕೆ ಕರೆದುಕೊಂಡು ಬರುತ್ತೇನೆ. ಬ್ಯಾಂಕ್ ಅಧಿಕಾರಿಗಳು ಸಾಲ ನೀಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಪ್ರಮಾಣಕ್ಕೆ ಬರಲಿ ಎಂದರು.

ಈ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕೆಂದು ಸಂತ್ರಸ್ತರು ಮನವಿ ಮಾಡಿದ್ದರು. ಆ ಕಾರಣಕ್ಕೆ ನಾನು ತನಿಖೆಗೆ ಒತ್ತಾಯಿಸಿದ್ದೆ. ಬಳಿಕ ಬ್ಯಾಂಕ್ನ ಅಧಿಕಾರಿಗಳು ನನಗೆ ಪತ್ರ ಬರೆದು ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ ಮತ್ತು ಆ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ ಎಂದರು.

ಬ್ಯಾಂಕ್ನ ಪ್ರಧಾನ ಕಚೇರಿಗೆ ತಿಳಿಯದೆ ಪ್ರಬಂಧಕರೊಬ್ಬರು ಇಷ್ಟು ಜನರಿಗೆ ಸಾಲ ನೀಡಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಮಧ್ಯವರ್ತಿಗಳ ಮೂಲಕ ಸಾಲದ ಹೆಸರಿನಲ್ಲಿ ಮೋಸ ಮಾಡಿರುವುದಾಗಿ ಸಂತ್ರಸ್ತರು ದೂರಿದ್ದಾರೆ ಎಂದು ರಘುಪತಿ ಭಟ್ ಹೇಳಿದರು. ಸಂತ್ರಸ್ತರು ಬಡವರಾಗಿದ್ದು, ಅವರಿಗೆ ಕಾನೂನು ನೆರವು ನೀಡುತ್ತೇನೆ ಎಂದರು.

ನಾಗೇಂದ್ರ ಮತ್ತು ನೂರಕ್ಕೂ ಹೆಚ್ಚು ಮಂದಿ ಸಂತ್ರಸ್ತರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಯಾವುದೇ ತನಿಖೆ ನಡೆಯಲಿ: ಯಶ್ಪಾಲ್

ಉಡುಪಿ: ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಯಲಿ ಅದಕ್ಕೆ ಸ್ವಾಗತ ಎಂದು ಬ್ಯಾಂಕ್ನ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಬ್ಯಾಂಕ್ನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾಧ್ಯಮಗಳ ಮುಂದೆ ಸುಳ್ಳು ಮಾಹಿತಿ ನೀಡುತ್ತಿದ್ದು ಬ್ಯಾಂಕ್ನ ಆಡಳಿತ ಮಂಡಳಿ ಈಗಾಗಲೇ ಕಾನೂನು ಕ್ರಮಕ್ಕೆ ಮುಂದಾಗಿದ್ದು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕ್ನ ವಿರುದ್ಧ ಆರೋಪ ಮಾಡುತ್ತಿರುವ ವ್ಯಕ್ತಿಗಳು ಬ್ಯಾಂಕ್ನಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ಬಗ್ಗೆ ಸಹಕಾರಿ ನ್ಯಾಯಾಲಯದಲ್ಲಿ ಸಾಲ ಮರುಪಾವತಿಗೆ ಆದೇಶ ನೀಡಿದ್ದು ತಪ್ಪಿದಲ್ಲಿ ಆಸ್ತಿ ಜಪ್ತಿಗೂ ಸೂಚನೆ ನೀಡಿದೆ ಎಂದಿದ್ದಾರೆ.

ಮಹಾಲಕ್ಷ್ಮಿ ಬ್ಯಾಂಕ್ನ ಏಳಿಗೆ ಸಹಿಸದೆ ವೈಯುಕ್ತಿಕ ತೇಜೋವಧೆಯ ದುರುದ್ದೇಶದಿಂದ ಬ್ಯಾಂಕ್ನ ವಿರುದ್ಧ ಆಧಾರರಹಿತ ಆರೋಪದ ಮೂಲಕ ಅವರ ಹತಾಶ ಮನಃಸ್ಥಿತಿ ಬಯಲಾಗಿದೆ. ಈ ಬಗ್ಗೆ ಶನಿವಾರ ಬ್ಯಾಂಕ್ನ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಎಲ್ಲಾ ದಾಖಲೆಗಳನ್ನು ಒದಗಿಸಿ ಮಾಹಿತಿ ನೀಡಲಾಗುವುದು ಎಂದರು.

ಮಹಾಲಕ್ಷ್ಮಿ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಆರ್ಬಿಐ ನಿಯಮಾವಳಿಯಂತೆ ಸಹಕಾರಿ ತತ್ವದಡಿ ಪಾರದರ್ಶಕ ರೀತಿಯಲ್ಲಿ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದ್ದು ಈ ಬಗ್ಗೆ ರಾಜ್ಯ ಸಹಕಾರ ಇಲಾಖೆ ಅಥವಾ ಇ.ಡಿ. ಸಿ.ಬಿ.ಐ. ಯಾವುದೇ ಉನ್ನತ ಮಟ್ಟದ ತನಿಖೆ ನಡೆಸಲಿ ಎಂದು ಹೇಳಿದರು.

ಬ್ಯಾಂಕ್ನ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.