ಶಿರ್ವ: ಬಂಟಕಲ್ಲು ದುರ್ಗಾಪರಮೇಶ್ವರಿ ದೇವಳದಲ್ಲಿ ರಾಜಾಪುರ ಸಾರಸ್ವತ ಸೇವಾ ವೃಂದದ ಆಶ್ರಯದಲ್ಲಿ ವರ್ಷಂಪ್ರತಿ ಜರುಗುವ ಸಾಮೂಹಿಕ ವಾಹನ ಪೂಜೆ, ಧಾರ್ಮಿಕ ಕಾರ್ಯಕ್ರಮ ದೇವಳದ ವೈದಿಕ ಶ್ರೀಕಾಂತ್ ಭಟ್ ನೇತೃತ್ವದಲ್ಲಿ ನಡೆಯಿತು. ಗೋಪೂಜೆ ನಡೆಯಿತು.

ಪೊಲೀಸ್ ಠಾಣಾಧಿಕಾರಿ ಶಕ್ತಿವೇಲು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾಹನಗಳನ್ನು ಚಲಾಯಿಸುವಾಗ ಸಾರಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಾಲನೆಯಲ್ಲೂ ಶ್ರದ್ಧಾಭಕ್ತಿಯಿಂದ ನಿರ್ವಹಿಸಿದರೆ ಅಪಘಾತ ರಹಿತವಾಗಿ ಸುರಕ್ಷಿತ ಚಾಲನೆ ಸಾಧ್ಯ. ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಾಣುವ ವಾಹನ ಪೂಜೆ ವಾಹನಗಳ ಮೇಲಿನ ಶ್ರದ್ಧೆ, ಭಕ್ತಿಯನ್ನು ತೋರಿಸುತ್ತದೆ. ಇದೊಂದು ಉತ್ತಮ ಪರಂಪರೆ ಎಂದರು.

ದೇವಳದ ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು, ನಿಕಟಪೂರ್ವ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ಸಡಂಬೈಲು ಶುಭ ಹಾರೈಸಿದರು.

ದೇವಳ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ಮಾಜಿ ಅಧ್ಯಕ್ಷ ಪಿ. ದಯಾನಂದ ಕಾಮತ್ ಮೂಡುಬೆಳ್ಳೆ, ಸದಸ್ಯರಾದ ದೇವದಾಸ್ ಪಾಟ್ಕರ್ ಮುದರಂಗಡಿ, ರಾಮದಾಸ್ ಪ್ರಭು, ರಾಘವೇಂದ್ರ ನಾಯಕ್ ಪಾಲಮೆ, ಅನಂತರಾಮ ವಾಗ್ಲೆ, ನಿವೃತ್ತ ಯೋಧ ರಾಜೇಂದ್ರ ಪಾಟ್ಕರ್, ವೀರೇಂದ್ರ ಪಾಟ್ಕರ್, ನಿವೃತ್ತ ಶಿಕ್ಷಕ ಬಿ. ಪುಂಡಲೀಕ ಮರಾಠೆ, ಕಾರು ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ರಾವ್, ಆಶಿಷ್ ಪಾಟ್ಕರ್, ವಿಶ್ವನಾಥ್ ನಾಯಕ್ ಪಾಂಬೂರು, ಸೇವಾ ವೃಂದದ ಪದಾಧಿಕಾರಿಗಳು ಇದ್ದರು. ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್ ಸ್ವಾಗತಿಸಿದರು. ಸೇವಾ ವೃಂದದ ಕಾರ್ಯದರ್ಶಿ ವಿಶ್ವನಾಥ್ ಬಾಂದೇಲ್ಕರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.