ಶಿರ್ವ: ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿನಿ ಶುೃತ ವಿ. ಭಟ್ ಅವರು ಐಎಸ್ಟಿಇ ಕರ್ನಾಟಕ ರಾಜ್ಯ ವಿಭಾಗದ 2023ನೇ ಸಾಲಿನ ‘ಉತ್ತಮ ವಿದ್ಯಾರ್ಥಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿ ಶುೃತ ವಿ. ಭಟ್ ಅವರು ಕಾಲೇಜಿನ ಐಎಸ್ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಕರ್ನಾಟಕ ಐಎಸ್ಟಿಇ ವತಿಯಿಂದ ನೀಡಲಾಗಿದೆ.

ಬೆಂಗಳೂರಿನ ವೆಮನ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 18ನೇ ಕರ್ನಾಟಕ ರಾಜ್ಯ ಮಟ್ಟದ ಐಎಸ್ಟಿಇ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸತತವಾಗಿ ಆರನೇ ಬಾರಿಗೆ ಈ ಪ್ರಶಸ್ತಿಯು ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ದೊರಕಿರುವುದಕ್ಕೆ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಕಾರ್ಯದರ್ಶಿ ರತ್ನಕುಮಾರ್ ಹಾಗೂ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.