ಉಡುಪಿ: ಪ್ರತಿಯೊಬ್ಬರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು ಎಂದು ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಹೇಳಿದರು.

ನಗರದ ಪುರಭವನದಲ್ಲಿ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾ ಸರ್ಕಾರಿ ಆಸ್ಪತ್ರೆ ಉಡುಪಿ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಬುಧವಾರ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಅಪಘಾತ ಹಾಗೂ ಗಂಭೀರ ಕಾಯಿಲೆಗಳ ಕಾರಣಗಳಿಂದ ಆಪತ್ತಿನಲ್ಲಿರುವವರ ಜೀವವನ್ನು ಕಾಪಾಡುವಲ್ಲಿ ರಕ್ತದಾನವು ಪ್ರಮುಖವಾಗಿದೆ. ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಮಾಹಿತಿಯ ಕೊರತೆ ಇದ್ದು, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಮಾತನಾಡಿ, ರಕ್ತದಾನ ಶ್ರೇಷ್ಠ ದಾನವಾಗಿದ್ದು, ಸಂಘವು ಕಳೆದ 24 ವರ್ಷಗಳಿಂದ ಸತತವಾಗಿ ರಕ್ತದಾನ ಶಿಬಿರವನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ಕೈಗೊಂಡು ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು.

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಿದರು.

ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಎಚ್. ದೇವರಾಜ ಪಾಣ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಮೂಡುಬಿದ್ರೆ ಉಪವಿಭಾಗದ ಎ.ಸಿ.ಎಫ್ ಶ್ರೀಧರ್ ಪಿ., ಕುಂದಾಪುರ ಉಪವಿಭಾಗದ ಎ.ಸಿ.ಎಫ್. ಪ್ರಕಾಶ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕರುಣಾಕರ ಜೆ. ಆಚಾರ್ಯ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ನಿರೂಪಿಸಿದರು. ಜಯರಾಮ ಎ. ವಂದಿಸಿದರು.

‘ಉಡುಪಿ ರಕ್ತನಿಧಿ ರಾಜ್ಯಕ್ಕೆ ಮಾದರಿ’

ರಕ್ತನಿಧಿಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಿದೆ. ಮಂಗಳೂರು ಉತ್ತರ ಕನ್ನಡ ಕಾರವಾರ ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ರೋಗಿಗಳು ಉಡುಪಿಗೆ ಚಿಕಿತ್ಸೆಗಾಗಿ ಬರುತ್ತಾರೆ. ಈ ಕಾರಣಕ್ಕೆ ಇಲ್ಲಿ ರಕ್ತಕ್ಕೆ ಹೆಚ್ಚು ಬೇಡಿಕೆ ಇದೆ ಎಂದರು. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಹೆಚ್ಚು ರಕ್ತದ ಬೇಡಿಕೆ ಇರುತ್ತದೆ. ಆದರೆ ನೆಗೆಟಿವ್ ಗುಂಪಿನ ರಕ್ತದ ಕೊರತೆ ಇದೆ ಎಂದು ಜಿಲ್ಲಾ ಶಸ್ತಚಿಕಿತ್ಸಕ ಡಾ.ಎಚ್. ಅಶೋಕ್ ಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.