ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ಜೆ: ಶಾಸಕ ಯಶ್‌ಪಾಲ್‌ ಸುವರ್ಣ ಭೇಟಿ

Published : 8 ಜುಲೈ 2024, 7:25 IST
Last Updated : 8 ಜುಲೈ 2024, 7:25 IST
ಫಾಲೋ ಮಾಡಿ
Comments

ಬ್ರಹ್ಮಾವರ: ಕರ್ಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಪಾಡಿಯಲ್ಲಿ ಗಾಳಿ–ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶುಕ್ರವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾನಿಗೀಡಾದ ಮನೆ, ತೋಟ ಹಾಗೂ ಕೃಷಿ ಬೆಳೆ ಬಗ್ಗೆ ವರದಿ ನೀಡಿ ಗರಿಷ್ಠ ಪರಿಹಾರಕ್ಕೆ ಶಿಫಾರಸ್ಸು ಮಾಡುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣಕ್ಕೆ ಹಿಂದಿನ ರಾಜ್ಯ ಸರ್ಕಾರ ನೀಡುತ್ತಿದ್ದ ₹5 ಲಕ್ಷ ಪರಿಹಾರವನ್ನು ₹1.50 ಲಕ್ಷಕ್ಕೆ ಕಡಿತಗೊಳಿಸಿದ್ದು, ಸರ್ಕಾರ ಈ ಮೊತ್ತವನ್ನು ₹5 ಲಕ್ಷಕ್ಕೆ ಏರಿಕೆ, ತುರ್ತು ಸಂದರ್ಭದಲ್ಲಿ ಸ್ಥಳದಲ್ಲಿಯೇ  ₹25 ಸಾವಿರ ವಿತರಣೆ ಮಾಡುವಂತೆ ಆಗ್ರಹಿಸುವುದಾಗಿ ಹೇಳಿದರು.

ಕರ್ಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇನಕರ ಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ಸೌಮ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿರಾಜ್, ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ ಕುಲಾಲ, ಕಾರ್ಯದರ್ಶಿ ನವೀನ ಪುತ್ರನ್, ಪಕ್ಷದ ಪ್ರಮುಖರಾದ ಆದರ್ಶ ಶೆಟ್ಟಿ ಕೆಂಜೂರು, ವಿನುತ್ ಶೆಟ್ಟಿ, ಸುಧಾಕರ ಸುವರ್ಣ, ರಘು ನಾಯ್ಕ, ಉಪೇಂದ್ರ, ಆಶಾ, ಅಕ್ಷಯ, ಮಣಿಕಂಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT