ಕುಂದಾಪುರ: ಹಣಕಾಸಿನ ಇತಿಮಿತಿಯಲ್ಲಿ ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧಿಯಾಗಲಿ’ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದು ಖುದ್ದು ಬಂದು ಭೇಟಿಯಾಗಲಿದ್ದಾರೆ. ಪಕ್ಷದಲ್ಲಿ ಗೊಂದಲಗಳಿಲ್ಲ ಎಂದು ಸಿಎಂ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರೇಣುಕಾಚಾರ್ಯ ಸಹಜವಾಗಿ ನೋವನ್ನು ವ್ಯಕ್ತಪಡಿಸಿದ್ದಾರೆ. ಮನುಷ್ಯ ಅಂದ ಮೇಲೆ ನೋವು ಸಹಜ. ಒಂದೆರಡು ದಿನ ನೋವು ಹೊರಹಾಕುತ್ತಾರೆ. ಪಕ್ಷದ ಚೌಕಟ್ಟಿನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶವಿದೆ. ಎಲ್ಲವನ್ನು ಸರಿದೂಗಿಸಿಕೊಂಡು ಹೋಗುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ... ಸಂಪುಟ ವಿಸ್ತರಣೆ: ಅಸಮಾಧಾನ ಹೊರಹಾಕಿದ ಶಿವನಗೌಡ ನಾಯಕ್, ತಿಪ್ಪಾರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.