ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಸೋಮವಾರ ಆರಂಭಗೊಂಡಿದೆ.

ಬೆಂಗಳೂರಿನಿಂದ ಬಂದಿರುವ ಸಿಐಡಿ ಪೊಲೀಸರ ತಂಡ ಪ್ರಕರಣದ ತನಿಖೆ ಆರಂಭಿಸಿದೆ ಎಂದು ಎಸ್ಪಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾಗುವ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಗಳನ್ನು ಪಾಲಿಸದ ಕಾರಣಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಧು ಪಿ., ಪ್ರಭಾರ ಠಾಣಾಧಿಕಾರಿ ಸುಜಾತಾ ಅವರನ್ನು ಅಮಾನತು ಮಾಡಲಾಗಿದೆ ಎಂದೂ ಹೇಳಿದ್ದಾರೆ.

ಮೃತ ಬಿಜು ಮೋಹನ್ ಅವರ ಸಂಬಂಧಿ, ಕೇರಳದ ಕೊಲ್ಲಂನ ಅನೀಶ್ ಡೆನಿಲ್ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೀಡಿರುವ ನಿರ್ದೇಶನಗಳಂತೆ ಮೃತ ವ್ಯಕ್ತಿಯ ಶವದ ಪಂಚನಾಮೆ ಯನ್ನು ಉಡುಪಿಯ ಜೆಎಂಎಫ್ಸಿ ನ್ಯಾಯಾಧೀಶರು ನಡೆಸಿದ್ದಾರೆ. ಮರ– ಣೋತ್ತರ ಪರೀಕ್ಷೆಯನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ನೀಡಿದ್ದು, ಅವರು ಕೇರಳಕ್ಕೆ ಒಯ್ದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.