ಉಡುಪಿ: ಕೌಟುಂಬಿಕ ನ್ಯಾಯಾಲಯಗಳ ಕಾರ್ಯವೈಖರಿ ಇತರೆ ನ್ಯಾಯಾಲಯಗಳಿಗಿಂತ ಭಿನ್ನವಾದುದು. ಇಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥವೇ ಮುಖ್ಯವಲ್ಲ; ರಾಜೀ ಸಂಧಾನದ ಮೂಲಕ ಬಿರುಕುಬಿಟ್ಟ ದಾಂಪತ್ಯವನ್ನು ಒಂದುಗೂಡಿಸಲು ಅವಕಾಶ ನೀಡಲಾಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ್ ಒಕಾ ಹೇಳಿದರು.

ಶನಿವಾರ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವರ್ಚುವಲ್ ಮೂಲಕ ಕೌಟುಂಬಿಕ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೌಟುಂಬಿಕ ನ್ಯಾಯಾಲಯಗಳು ಸಿವಿಲ್ ನ್ಯಾಯಾಲಯಗಳಿಗಿಂತ ಭಿನ್ನವಾಗಿ ಕಾರ್ಯ ನಿರ್ವಹಿಸುತ್ತದೆ. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಿಗೆ ವಿಶೇಷ ಕೌಶಲಗಳು ಅಗತ್ಯ. ಕುಟುಂಬದ ಮುಖ್ಯಸ್ಥನ ನೆಲೆಯಲ್ಲಿಯೂ ಪ್ರಕರಣವನ್ನು ನೋಡಬೇಕಾಗುತ್ತದೆ ಎಂದರು.

ಉಡುಪಿಯಲ್ಲಿ ಕೌಟುಂಬಿಕ ನ್ಯಾಯಾಲಯ ಆಗಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ್ದು, ನ್ಯಾಯಾಧೀಶರು ಹಾಗೂ ವಕೀಲರು ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸಬೇಕು. ಕೌಟುಂಬಿಕ ನ್ಯಾಯಾಲಯಗಳ ಸ್ಥಾಪನೆಯ ಹಿಂದಿನ ಉದ್ದೇಶ ಸಾಕಾರವಾಗಲಿ ಎಂದು ಆಶಿಸಿದರು.

ಹೈಕೋರ್ಟ್ ನ್ಯಾಯಾಧೀಶರಾದ ಅರವಿಂದ್ ಕುಮಾರ್ ಮಾತನಾಡಿ, ಬಹಳಷ್ಟು ಭೂಸ್ವಾಧೀನ ಪ್ರಕರಣಗಳು ಸರ್ಕಾರ ಹಾಗೂ ಭೂಮಿ ಕಳೆದುಕೊಂಡವರ ನಡುವಿನ ಜಟಾಪಟಿಯಿಂದ ಇತ್ಯರ್ಥವಾಗದೆ ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿವೆ. ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗುತ್ತಿದೆ. ಯೋಜನೆಗಳ ವೆಚ್ಚವೂ ಹೆಚ್ಚಾಗುತ್ತಿದೆ. ಜಿಲ್ಲಾಧಿಕಾರಿ ಹಂತದಲ್ಲಿ ಬಗೆಹರಿಯುವಂತಹ ಪ್ರಕರಣಗಳಿದ್ದರೆ ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಬೇಕು ಎಂದು ಸಲಹೆ ನೀಡಿದರು.

ವಿಮಾ ಕಂಪೆನಿಗಳು ಗ್ರಾಹಕರಿಗೆ ಪರಿಹಾರ ನೀಡುವ ವಿಚಾರದಲ್ಲಿ ಗಟ್ಟಿ ನಿಲುವುಗಳನ್ನು ತಾಳುತ್ತಿರುವುದರಿಂದ ಪ್ರಕರಣಗಳು ಇತ್ಯರ್ಥವಾಗುತ್ತಿಲ್ಲ. ವಿಮಾ ಮೊತ್ತ ಪಾವತಿಸಲು ಹೆಚ್ಚಿನ ಕಾಲ ತೆಗೆದುಕೊಂಡಷ್ಟು ಗ್ರಾಹಕರಿಗೆ ಪಾವತಿಸಬೇಕಾದ ಮೊತ್ತದ ಪ್ರಮಾಣ ಏರಿಕೆಯಾಗಲಿದೆ. ಜತೆಗೆ, ಸಮಯವೂ ವ್ಯರ್ಥವಾಗಲಿದ್ದು, ಪ್ರಕರಣಗಳ ನಿರ್ವಹಣೆಗೆ ಹೆಚ್ಚುವರಿ ಹಣ ಭರಿಸಬೇಕಾಗುತ್ತದೆ. ಲೋಕ ಅದಾಲತ್ನಲ್ಲಿ ಬಗೆಹರಿಸಿಕೊಳ್ಳಬಹುದಾದ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬೇಕು. ಇದರಿಂದ ವಿಮಾ ಕಂಪೆನಿಗಳಿಗೆ ಹಾಗೂ ಗ್ರಾಹಕರಿಗೆ ಅನುಕೂಲ ಎಂದು ಸಲಹೆ ನೀಡಿದರು.

ಶೇ 90ರಷ್ಟು ಚೆಕ್ಬೌನ್ಸ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳಬಹುದು. ದೂರುದಾರ ಹಾಗೂ ಎದುರುದಾರರನ್ನು ಅದಾಲತ್ಗೆ ಕರೆಸಿ ರಾಜೀ ಮೂಲಕ ಪ್ರಕರಣ ಮುಕ್ತಾಯಗೊಳಿಸಬಹುದು. ಇದರಿಂದ ಸಾಲ ಕೊಟ್ಟವರೂ, ಪಡೆದವರೂ ಗೆದ್ದಂತಾಗುತ್ತದೆ ಎಂದು ಕಿವಿಮಾತು ಹೇಳಿದರು.

ಪೊಲೀಸರು ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ಕಾನೂನುಗಳ ಪಾಲನೆ ಹಾಗೂ ದಂಡ ಕಟ್ಟುವ ವಿಧಾನಗಳ ಕುರಿತು ಸಮಾಧಾನದಿಂದ ತಿಳಿ ಹೇಳಿದರೆ, ಪೊಲೀಸ್ ವ್ಯವಸ್ಥೆಯ ಮೇಲಿನ ಭಯ ನಿವಾರಣೆಯಾಗಿ, ಜನಸ್ನೇಹಿ ವ್ಯವಸ್ಥೆ ಜಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ತಾಲ್ಲೂಕು ಅಧಿಕಾರಿಗಳಿಗೆ ಎಸ್ಪಿ ಸೂಚನೆ ನೀಡಬೇಕು ಎಂದು ತಿಳಿಸಿದರು.

ಮಾರ್ಚ್ 27ರಂದು ಉಡುಪಿ, ಕುಂದಾಪುರ, ಕಾರ್ಕಳ ನ್ಯಾಯಲಯಗಳ ಆವರಣದಲ್ಲಿ ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ. ನ್ಯಾಯಾಧೀಶರು, ವಕೀಲರು ಪರಸ್ಪರ ಸಹಕಾರದೊಂದಿಗೆ ರಾಜೀ ಸಂಧಾನದ ಮೂಲಕ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಲು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಧೀಶರಾದ ಜಾನ್ ಮೈಕಲ್ ಕುನ್ಹಾ, ಸೂರಜ್ ಗೋವಿಂದರಾಜ್, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್.ಸುಬ್ರಹ್ಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಾವೇರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ ವಿಷ್ಣುವರ್ಧನ್, ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.