ಬಜಪೆ: ಜನರ ಸಹಕಾರವಿದ್ದರೆ ಅಭಿವೃದ್ಧಿ ಕಾಮಗಾರಿ ನಡೆಸಲು ಸಾಧ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 12ಕ್ಕೂ ಅಧಿಕ ಕಡೆ ₹ 90 ಲಕ್ಷ ವೆಚ್ಚದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಜನರ ಬಹುಬೇಡಿಕೆಯ ಕುಡಿಯುವ ನೀರಿನ ಯೋಜನೆ ಜಲಜೀವನ್ ಮಿಷನ್ ಕಾಮಗಾರಿ ಪ್ರಗತಿಯಲ್ಲಿದೆ. ಬೋರ್ವೆಲ್ ಜತೆಗೆ ಬಹುಗ್ರಾಮ ಕುಡಿಯುವ ನೀರಿಗೆ ಯೋಜನೆಗೆ ಬಂಟ್ವಾಳ, ಮೂಲ್ಕಿ ಮೂಡಬಿದ್ರೆ ಕ್ಷೇತ್ರ ಶಾಸಕರ ಸಹಿತ ಹೆಚ್ಚುವರಿಯಾಗಿ ಅನುದಾನ ಪಡೆದು ನದಿಯಿಂದ ಕುಡಿಯುವ ನೀರಿನ ಸಂಪರ್ಕ ಯೋಜನೆಗೆ ಒತ್ತು ನೀಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎ ಇಸ್ಮಾಯಿಲ್, ಸದಸ್ಯೆ ಸುಮಾ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖ್ ಸುಹಾನ್ ಆಳ್ವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.