ಹೆಬ್ರಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಜನರಿಗೆ ಅಪಾರ ಗೌರವವಿದೆ. ಗ್ರಾಮೀಣ ಭಾಗದ ಜನರಿಗೆ ಬೆಳಕಾದ ಈ ಸಂಸ್ಥೆಯ ಜನಪರ ಯೋಜನೆಗಳಿಂದಾಗಿ ಯೋಜನೆ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ. ಯೋಜನೆಯು ಸಾರ್ವಜನಿಕರ ಅಭಿವೃದ್ಧಿ ಜೊತೆಗೆ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಹೆಬ್ರಿ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಾಗರಾಜ ಶೆಟ್ಟಿ ಹೇಳಿದರು.

ಹೆಬ್ರಿ ಶ್ರೀಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಮಂಗಳವಾರ ನಡೆದ ‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹೆಬ್ರಿ ತಾಲ್ಲೂಕು ಹಾಗೂ ಪ್ರಗತಿ ಬಂಧು ಸ್ವ–ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಪದಾಧಿಕಾರಿಗಳ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನೆಯ ಮೂಲಕ ಸ್ವ–ಸಹಾಯ ಸಂಘಗಳನ್ನು ಶಿಸ್ತುಬದ್ಧವಾಗಿ ರಚಿಸಿ, ಸಂಘದ ಸದಸ್ಯರಿಗೆ ಆರ್ಥಿಕ ಸಹಾಯ ನೀಡಿ, ಜೀವನೋಪಾಯ ದಾರಿ ತೋರಿಸುತ್ತಾ ಸಂಸ್ಥೆಯು ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಹೆಬ್ರಿ ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ‘ಡಾ.ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಮಧ್ಯಮ ವರ್ಗದ ಜನರ ಬದುಕು ಹಸನಾಗಿದೆ. ಪ್ರಗತಿ ಬಂಧು ಸ್ವ–ಸಹಾಯ ಒಕ್ಕೂಟಗಳ ಮೂಲಕ ಫಲಾನುಭವಿಗಳಿಗೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಮಾಡುತ್ತಿರುವ ಸೇವೆ, ಸಾಧನೆಯು ದೇಶಕ್ಕೆ ಮಾದರಿ’ ಎಂದು ಹೇಳಿದರು.

ಕಾರ್ಕಳ ತಾಲ್ಲೂಕು ಕೇಂದ್ರ ಒಕ್ಕೂಟಗಳ ಸಮಿತಿಯ ಸ್ಥಾಪಕ ಅಧ್ಯಕ್ಷ ಶಾಂತಿರಾಜ್ ಜೈನ್ ಶುಭಕೋರಿದರು. ಜನಜಾಗೃತಿ ವೇದಿಕೆಯ ನಂದ ಕುಮಾರ್ ಹೆಗ್ಡೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಬ್ಯಾಂಕ್ ಆಫ್ ಬರೋಡ ಹೆಬ್ರಿ ಶಾಖೆ ಪ್ರಬಂಧಕ ಪವನ್ ಕುಮಾರ್ ಮಾಹಿತಿ ನೀಡಿದರು.

ಉದ್ಯಮಿ ಭಾಸ್ಕರ್ ಜೋಯಿಸ್, ಹೆಬ್ರಿ ತಾಲ್ಲೂಕು ಕೇಂದ್ರ ಸಮಿತಿ ಪ್ರಗತಿ ಬಂದು ಸ್ವ–ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಹೆಗ್ಡೆ, ಶೌರ್ಯ ವಿಪತ್ತು ಘಟಕದ ಅಧ್ಯಕ್ಷ ಸುರೇಶ್ ಭಂಡಾರಿ, ಯೋಜನೆಯ ಪದಾಧಿಕಾರಿಗಳಾದ ನರೇಂದ್ರ ನಾಯಕ್, ಶಾಲಿನಿ ಭಂಡಾರಿ, ಯೋಗೀಶ್ ಮುದ್ರಾಡಿ, ಸಪ್ನಾ, ಹರೀಶ್ ಚೇರ್ಕಾಡಿ ಇದ್ದರು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚಂದ್ರಾವತಿ, ಯೋಜನೆಯ ಕೃಷಿ ಅಧಿಕಾರಿ ಉಮೇಶ್, ಸೇವಾ ಪ್ರತಿನಿಧಿಗಳು ಸಹಕರಿಸಿದರು. ಹೆಬ್ರಿ ತಾಲ್ಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಲೀಲಾವತಿ ಸ್ವಾಗತಿಸಿದರು. ಮೇಲ್ವಿಚಾರಕ ಉದಯ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.