ಉಡುಪಿ: ನಗರದ ಅಂಬಲಪಾಡಿ ಬೈಪಾಸ್ ಸಮೀಪದ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಬೆಳಗ್ಗಿನ ಜಾವ ಅಗ್ನಿ ಆನಾಹುತ ಸಂಭವಿಸಿ ಉದ್ಯಮಿ ಮೃತಪಟ್ಟಿದ್ದಾರೆ.

ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (56) ಮೃತಪಟ್ಟವರು. ಅವರ ಪತ್ನಿ ಅಶ್ವಿನಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರ ಪುತ್ರ ಹಾಗೂ ಪುತ್ರಿ ಸ್ನಾನದ ಕೋಣೆಯಲ್ಲಿ ಆಶ್ರಯ ಪಡೆದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.

ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ಅಂತಸ್ತಿನ ಮನೆಯೊಳಗಿನ ವಸ್ತು ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.