ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ (ಮಾಹೆ) ಮೊದಲ ಕುಲಪತಿ ಹಾಗೂ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ.ಎಂ.ಎಸ್. ವಲ್ಯತ್ತಾನ್(90) ಅವರು ಮಣಿಪಾಲದಲ್ಲಿ ನಿಧನರಾದರು.

ತಿರುವನಂತಪುರದ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ್ದ ಅವರು, ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್ಬರ್ಗ್, ಇಂಗ್ಲೆಂಡ್ ಮತ್ತು ಕೆನಡಾದಿಂದ ಫೆಲೋಶಿಪ್ ಪಡೆದಿದ್ದರು.

ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಅವರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು.

ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್ ಸಂಸ್ಥೆಯನ್ನು ಸ್ಥಾಪಿಸುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ಡಿಸ್ಪೋಸಬಲ್ ಬ್ಲಡ್ ಬ್ಯಾಗ್ ಮತ್ತು ಟಿಲ್ಟಿಂಗ್ ಡಿಸ್ಕ್ ಹೃದಯ ಕವಾಟದಂತಹ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವಲ್ಲಿ ಅವರ ಕೊಡುಗೆ ಮಹತ್ವದ್ದು.

ವಲ್ಯತ್ತಾನ್ ಅವರು 1993 ರಿಂದ ಮಣಿಪಾಲದ ಮಾಹೆಯಲ್ಲಿ ಕುಲಪತಿಯಾಗಿ ಕಾರ್ಯ ನಿರ್ವಹಿಸಿದ್ದರು.

2005 ರಲ್ಲಿ ಪದ್ಮವಿಭೂಷಣ, 2002ರಲ್ಲಿ ಪದ್ಮಶ್ರೀ ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.