ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಈಚೆಗೆ ನಡೆದ ಗ್ಯಾಂಗ್ ವಾರ್ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆಶಿಕ್, ರಖೀಬ್, ಸಕ್ಲೇನ್ ಬಂಧಿತರು. ಮೇ 18ರಂದು ಗ್ಯಾಂಗ್ ವಾರ್ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿದಾಡಿತ್ತು. ವಿಡಿಯೊ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಉಡುಪಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಎರಡು ಕಾರು, ಎರಡು ಬೈಕ್, ಡ್ರ್ಯಾಗರ್, ತಲವಾರು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಡಾ.ಕೆ. ಅರುಣ್ ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಗಳು ಕಾಪುವಿನ ಗರುಡ ಗ್ಯಾಂಗಿನವರು ಎಂದು ತಿಳಿದುಬಂದಿದ್ದು, ಗ್ಯಾಂಗ್ ಸದಸ್ಯರಲ್ಲಿ ಕಾಣಿಸಿಕೊಂಡ ವೈಮನಸ್ಸು ಹೊಡೆದಾಟಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.