ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ಪರಿಶಿಷ್ಟ ಪಂಗಡದ ಯುವತಿಯನ್ನು ಒತ್ತಾಯಪೂರ್ವಕವಾಗಿ ಮಾದಕ ವಸ್ತು ಸೇವಿಸುವಂತೆ ಮಾಡಿ ನಡೆಸಿದ ಗ್ಯಾಂಗ್‌ರೇಪ್ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಿ ಎಂದು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಿಂದ ಸಮಾಜದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ಉಂಟಾಗಿದ್ದು, ಈ ಜಿಹಾದಿ ಕೃತ್ಯ ಎಸಗಿದವರು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದೆ. ಇದೊಂದು ಪೂರ್ವಯೋಜಿತ ಕೃತ್ಯ ಎಂದು ಕಂಡುಬರುತ್ತದೆ. ಇದರ ಹಿಂದೆ ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಇದೆ. ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದೆ.

ಕಾರ್ಕಳದಲ್ಲಿ ಕಾಲೇಜ್ ಕ್ಯಾಂಪಸ್‌ಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುತ್ತದೆ. ಆದರೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿಲ್ಲ. ಪೊಲೀಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಯುವತಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.