ಪಡುಬಿದ್ರಿ: ‘ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು’ ಎಂದು ಪಡುಬಿದ್ರಿ ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಎನ್.ಟಿ.ಅಂಚನ್ ಹೇಳಿದರು.

ಸಮೃದ್ಧಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಪಡುಬಿದ್ರಿ, ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸೂರ್ತಿ ಕ್ಲಬ್, ಪ್ರಾಥಮಿಕ ಆರೋಗ್ಯ ಕೇಂದ್ರ, ಮಹಿಳಾ ಬಿಲ್ಲವ ಸಂಘ, ನವಶಕ್ತಿ ವುಮೆನ್ಸ್ ವೆಲ್ಫೇರ್ ಸೊಸೈಟಿ ಮತ್ತು ನೋವಾ ಐವಿಎಫ್ನ ಸಹಯೋಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಮಹಿಳಾ ಆರೋಗ್ಯ ಮತ್ತು ಬಂಜೆತನ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮೃದ್ಧಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಪಡುಬಿದ್ರಿ ಲಯನ್ಸ್ ಕ್ಲಬ್ನ ಅಧ್ಯಕ್ಷ ಸಂಪತ್ ಕುಮಾರ್ ಆಚಾರ್ಯ, ಪಡುಬಿದ್ರಿ ಬಿಲ್ಲವ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಆನಂದ್, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಪ್ರಸೂತಿ ತಜ್ಞೆ ಪ್ರಜ್ಞಾ ಕುಮಾರಿ, ನೋವಾ ಐವಿಎಫ್ನ ಸಾರ್ವಜನಿಕ ಸಂಪರ್ಕ ಪ್ರಬಂಧಕಿ ಸುರೇಖಾ, ಡಾ.ಐಶ್ವರ್ಯಾ ಚಂದ್ರಶೇಖರ್ ಇದ್ದರು.

ಪಡುಬಿದ್ರಿ ಲಯನ್ಸ್ ಕ್ಲಬ್ನ ಕಾರ್ಯದರ್ಶಿ ಪ್ರಗತ್ ಶೆಟ್ಟಿ ಸ್ವಾಗತಿಸಿದರು. ಸಂತೃಪ್ತಿ ಎಂ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಲಯನ್ಸ್ ಸೂರ್ತಿ ಕ್ಲಬ್ ಅಧ್ಯಕ್ಷೆ ಸ್ನೇಹಾ ಪ್ರವೀಣ್ ವಂದಿಸಿದರು. 75 ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 15 ಮಂದಿ ಬಂಜೆತನದ ಕುರಿತಾದ ಚಿಕಿತ್ಸೆಗೆ ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.