ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿಯಲ್ಲಿ ಮುಂದುವರಿದ ಮಳೆ: ಮನೆಗಳಿಗೆ ನುಗ್ಗಿದ ನೀರು

Published 19 ಜುಲೈ 2024, 9:41 IST
Last Updated 19 ಜುಲೈ 2024, 9:41 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ವಿವಿದಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಉಡುಪಿ ನಗರ ಹೊರವಲಯದ ಕೆಮ್ತೂರಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ.

ಪ್ರವಾಹಪೀಡಿತ ಕೆಮ್ತೂರಿನ ಎರಡು ಮನೆಗಳಿಂದ ಜನರನ್ನು ಅಗ್ನಿಶಾಮಕ ದಳದವರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

ಧಾರಾಕಾರ ಮಳೆ ಮುಂದುವರಿದಿರುವುದರಿಂದ ನೆರೆ ನೀರು ಇಳಿಕೆಯಾಗುತ್ತಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಉಡುಪಿ ನಗರದ ಕುಕ್ಕಿಕಟ್ಟೆ ಜಂಕ್ಷನ್ ನಿಂದ ಡಯಾನ ಟಾಕೀಸ್ ಕಡೆ ಹೋಗುವ ರಸ್ತೆ ಜಲಾವೃತವಾಗಿರುವುದರಿಂದ ವಾಹನ ಸವಾರರಿಗೆ ತೊಂದರೆಯಾಯಿತು.

ಕುಂದಾಪುರ, ಕಾರ್ಕಳ, ಬ್ರಹ್ಮಾವರ, ಬೈಂದೂರು, ಹೆಬ್ರಿ ವ್ಯಾಪ್ತಿಯಲ್ಲೂ ಧಾರಾಕಾರ ಮಳೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT